ಬೆಂಗಳೂರು: ರಾಜ್ಯದ ಎಂಟು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆ ಎಂಟು ಜಿಲ್ಲೆಗಳ ಡಿಸಿಗಳು, ಜಿ.ಪಂ. ಸಿಇಒಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ. ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ಮಾಡಿದ್ದು ಯಾವುದೇ ಕಾರಣಕ್ಕೂ ಕುಡಿಯುವ ನೀರಿಗೆ ಸಮಸ್ಯೆ ಆಗಬಾರದು ಎಂದು ಅಗತ್ಯ ಕ್ರಮಕ್ಕೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ವಿವಿಧ ಯೋಜನೆಗಳ ಪ್ರಗತಿ ಬಗ್ಗೆ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ರಾಜ್ಯ ಕೆಲ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆ ಜಲಜೀವನ್ ಮಿಷನ್ ಬಗ್ಗೆ ಅಧಿಕಾರಿಗಳ ಜತೆ ಸಿಎಂ ಸಭೆ ನಡೆಸಿದ್ದು 8 ಜಿಲ್ಲೆಗಳ ಡಿಸಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಸಭೆ ನಡೆಸಿದ್ದಾರೆ.