ವಡೋದರ: ಕುಡಿದ ಅಮಲಿನಲ್ಲಿ ಮಹಿಳೆಯೊಬ್ಬರು (Drunk Woman)ಪೊಲೀಸರ ಮೇಲೆ ಹಲ್ಲೆ ನಡೆಸಿ, ಬೈದು ಕೂಗಾಡುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ವಡೋದರದಲ್ಲಿ (Vadodara)ಈ ರೀತಿ ಮದ್ಯ ಸೇವಿಸಿ ಅನುಚಿತವಾಗಿ ವರ್ತಿಸಿದ ಮಹಿಳೆಯನ್ನು ಬಂಧಿಸಲಾಗಿದೆ. ಗುಜರಾತ್ನಲ್ಲಿ (Gujarat) ಮದ್ಯಪಾನ ನಿಷೇಧದ ನಂತರವೂ ಈಕೆಗೆ ಮದ್ಯ ಎಲ್ಲಿಂದ ಸಿಕ್ಕಿತು ಎಂಬುದು ಈಗ ಪ್ರಶ್ನೆಯಾಗಿದೆ. ಗುಜರಾತಿನಲ್ಲಿ ಮದ್ಯವನ್ನು ನಿಷೇಧಿಸಿದ ನಂತರವೂ ಅಲ್ಲಿ ಮದ್ಯ ಮಾರಾಟ ಮತ್ತು ಸೇವನೆ ನಡೆಯುತ್ತಿದೆ ಎಂಬುದನ್ನು ಇದು ತೋರಿಸುತ್ತದೆ.
ವೈರಲ್ ಆಗಿರುವ ವಿಡಿಯೊದಲ್ಲಿ ಮಹಿಳೆ ರಸ್ತೆಯಲ್ಲಿ ಪೊಲೀಸರನ್ನು ನಿಂದಿಸಿ ಹೊಡೆಯಲು ಯತ್ನಿಸುತ್ತಿರುವುದನ್ನು ಕಾಣಬಹುದು. ಆಕೆಯನ್ನು ಮಹಿಳಾ ಪೇದೆಯೊಬ್ಬರು ತಡೆದಿದ್ದಾರೆ. ಆದರೂ ಆಕೆ ಪೊಲೀಸರ ಮೇಲೆ ದಾಳಿ ಮಾಡಲು ನಿರಂತರವಾಗಿ ಪ್ರಯತ್ನಿಸುತ್ತಿರುತ್ತಾಳೆ. ಕುಡಿದ ಅಮಲಿನಲ್ಲಿ ವಾಹನ ಚಲಾಯಿಸಿ ಸಿಕ್ಕಿಬಿದ್ದಾಗ ಗಲಾಟೆ ಶುರುವಾಗಿತ್ತು. ಸದ್ಯ ಮಹಿಳೆ ವಿರುದ್ಧ ಪ್ರಕರಣ ದಾಖಲಾಗಿದೆ.