ಕುದುರೆಮುಖ ವ್ಯಾಪ್ತಿಯ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಭದ್ರಾ ನದಿ ಅಬ್ಬರಕ್ಕೆ ಹೆಬ್ಬಾಳೆ ಸೇತುವೆ ಮುಡುಗಡೆಯಾಗಿದೆ. ಮಳೆಗಾಲದಲ್ಲಿ ಮೊದಲ ಬಾರಿಗೆ ಕಳಸ ತಾಲೂಕಿನ ಹೊರನಾಡು ಬಳಿ ಇರುವ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ.
ಸೇತುವೆ ಮುಳುಗಡೆಯಿಂದಾಗಿ ಹೊರನಾಡು-ಕಳಸ ಸಂಪರ್ಕ ಕಡಿತಗೊಂಡಿದೆ. ಕಳೆದ ರಾತ್ರಿಯಿಂದಲೂ ಸೇತುವೆಯ ಮೇಲೆ ಭದ್ರಾ ನದಿ ಉಕ್ಕಿ ಹರಿಯುತ್ತಿದೆ