ಮಂಡ್ಯ : ವಿಧಾನಸಭಾ ಸಾರ್ವತ್ರಿಕ ಚುನಾವಣೆ ನಡೆಯುತ್ತಿರುವ ಬೆನ್ನಲ್ಲೇ ಮದ್ದೂರು ಕ್ಷೇತ್ರದ ಕಾಂಗ್ರೆಸ್ ಪಾಳಯದ ಮೂವರು ಮುಖಂಡರ ಮನೆಗಳ ಮೇಲೆ
ಚುನಾವಣಾಧಿಕಾರಿಗಳು ದಾಳಿ ನಡೆಸಿ ಬರೋಬ್ಬರಿ 2 ಕೋಟಿ ಗೂ ಹೆಚ್ಚು ಹಣವನ್ನು ವಶಪಡಿಸಿಕೊಂಡು ಭರ್ಜರಿ ಬೇಟೆಯಾಡಿದ್ದಾರೆ.
ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ದೊಡ್ಡಿ ಬೀದಿಯ ನಿವಾಸಿ ಸುರೇಶ್ ಬಾಬು ಎಂಬುವವರ ಮನೆ ಮೇಲೆ ಭಾನುವಾರ ಬೆಳಗಿನ ಜಾವ 6 ಗಂಟೆಗೆ ದಾಳಿ ಮಾಡಿರುವ ಫ್ಲೈಯಿಂಗ್ ಸ್ಕ್ವಾಡ್ ತಂಡ ಮನೆಯನ್ನು ಇಂಚಿಂಚು ಪರಿಶೀಲನೆ ನಡೆಸಿ ಹಣವನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಮದ್ದೂರು ಮತ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಕೆ.ಎಂ.ಉದಯ್ ಅವರ ಆಪ್ತರಾಗಿರುವ ಸುರೇಶ್ ಬಾಬು ಅವರನ್ನು ವಶಕ್ಕೆ ಪಡೆದಿದ್ದು, ಮದ್ದೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ವರದಿ : ಗಿರೀಶ್ ರಾಜ್ ಮಂಡ್ಯ.