ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮುಂಜಾನೆ ಮಂಜು ಆವರಿಸಲಿದ್ದು, ಹಲವೆಡೆ ಹಗುರ ಮಳೆ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಮಳೆ ಇದ್ದರೂ ಬಿಸಿಲ ಧಗೆ ಇನ್ನಷ್ಟು ಹೆಚ್ಚಾಗಲಿದೆ. ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ.
ಕರ್ನಾಟಕ ಕರಾವಳಿ ಮತ್ತು ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಕೆಲವೆಡೆ ಕಡೆಗಳಲ್ಲಿ ಕನಿಷ್ಠ ಉಷ್ಣಾಂಶವು ಗಮನಾರ್ಹವಾಗಿ ಇಳಿಕೆ ಆಗಲಿದೆ. ಸಾಮಾನ್ಯಕ್ಕಿಂತ 2-4 ಡಿ.ಸೆ ಕನಿಷ್ಠ ಉಷ್ಣಾಂಶ ಕಡಿಮೆ ಆಗಲಿದೆ. ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಕನಿಷ್ಠ ಉಷ್ಣಾಂಶವು 3 ಡಿ.ಸೆ ಹೆಚ್ಚಾಲಿದೆ. ಇದರಿಂದ ವಾತಾವರಣದಲ್ಲಿ ಬಿಸಿಲ ಧಗೆ ಹೆಚ್ಚಾಗಲಿದೆ.
ಬೆಂಗಳೂರಲ್ಲಿ ಮಂಜು ಮುಸುಕು
ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಆದರೆ ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ವಾತಾವರಣ ಇರಲಿದೆ. ಗರಿಷ್ಠ ಉಷ್ಣಾಂಶ 34 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಬೆಂಗಳೂರು ನಗರ: 33 ಡಿ.ಸೆ -20 ಡಿ.ಸೆ
ಮಂಗಳೂರು: 33 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 33 ಡಿ.ಸೆ – 18 ಡಿ.ಸೆ
ಗದಗ: 34 ಡಿ.ಸೆ – 18 ಡಿ.ಸೆ
ಹೊನ್ನಾವರ: 34 ಡಿ.ಸೆ- 21 ಡಿ.ಸೆ
ಕಲಬುರಗಿ: 36 ಡಿ.ಸೆ – 22 ಡಿ.ಸೆ
ಬೆಳಗಾವಿ: 33 ಡಿ.ಸೆ – 16 ಡಿ.ಸೆ
ಕಾರವಾರ: 35 ಡಿ.ಸೆ – 21 ಡಿ.ಸೆ