ಅಣಬೆಗಳು ಆ್ಯಂಟಿ ಆಕ್ಸಿಡೆಂಟ್, ವಿಟಮಿನ್ ಮತ್ತು ಖನಿಜಗಳಿಂದ ಸಮೃದ್ಧವಾಗಿವೆ. ಇದನ್ನು ನಮ್ಮ ದಿನನಿತ್ಯದ ಆಹಾರಗಳಲ್ಲಿ ಬಳಸುವುದರಿಂದ ಕಣ್ಣಿನ ದೃಷ್ಟಿ ಉತ್ತಮವಾಗಿರುತ್ತದೆ. ಇವತ್ತಿನ ನಮ್ಮ ರೆಸಿಪಿಯಲ್ಲಿ ಮಕ್ಕಳಿಗೆ ಹಾಗೂ ದೊಡ್ಡವರೂ ಇಷ್ಟಪಡುವ ಮಶ್ರೂಮ್ ಸ್ಯಾಂಡ್ವಿಚ್ ಯಾವರೀತಿ ಮಾಡುವುದು ಎಂಬುದನ್ನು ತಿಳಿಸಿಕೊಡುತ್ತಿದ್ದೇವೆ
ಬೇಕಾಗುವ ಸಾಮಗ್ರಿಗಳು:
ಹೆಚ್ಚಿದ ಅಣಬೆಗಳು – 250 ಗ್ರಾಂ
ಹೆಚ್ಚಿದ ಈರುಳ್ಳಿ- 1
ಹೆಚ್ಚಿದ ಬೆಳ್ಳುಳ್ಳಿ – 1
ಚಿಲ್ಲಿ ಫ್ಲೇಕ್ಸ್ – 1 ಚಮಚ
ಒರೆಗಾನೋ – 1 ಚಮಚ
ಉಪ್ಪು- ರುಚಿಗೆ ತಕ್ಕಷ್ಟು
ಎಣ್ಣೆ – ಅಗತ್ಯಕ್ಕೆ ತಕ್ಕಷ್ಟು
ಬ್ರೆಡ್ – 4
ತುರಿದ ಚೀಸ್ – ಕಾಲು ಕಪ್
ಮಾಡುವ ವಿಧಾನ:
* ಮೊದಲಿಗೆ ಒಂದು ಪ್ಯಾನ್ಗೆ ಸ್ವಲ್ಪ ಎಣ್ಣೆ ಹಾಕಿಕೊಂಡು ಅದಕ್ಕೆ ಹೆಚ್ಚಿದ ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಹಾಕಿಕೊಂಡು ಹಸಿವಾಸನೆ ಹೋಗುವವರೆಗೆ ಫ್ರೈ ಮಾಡಿಕೊಳ್ಳಿ.
* ಬಳಿಕ ಇದಕ್ಕೆ ಹೆಚ್ಚಿದ ಮಶ್ರೂಮ್ ಹಾಕಿಕೊಂಡು ಚನ್ನಾಗಿ ಫ್ರೈ ಮಾಡಿಕೊಳ್ಳಬೇಕು.
* ಈಗ ಇದಕ್ಕೆ ಉಪ್ಪು, ಚಿಲ್ಲಿ ಫ್ಲೇಕ್ಸ್ ಮತ್ತು ಒರೆಗಾನೋ ಹಾಕಿಕೊಂಡು ತಿರುವಿಕೊಳ್ಳಿ.
* ಬಳಿಕ ಈ ಮಿಶ್ರಣಕ್ಕೆ ತುರಿದ ಚೀಸ್ ಅನ್ನು ಹಾಕಿಕೊಂಡು ಚನ್ನಾಗಿ ಮಿಕ್ಸ್ ಮಾಡಿಕೊಳ್ಳಿ.
* ನಂತರ ಒಂದು ಬ್ರೆಡ್ ಮೇಲೆ ಈ ಮಿಶ್ರಣವನ್ನು ಹದವಾಗಿ ಹಾಕಿಕೋಂಡು ಇನ್ನೊಂದು ಬ್ರೆಡ್ನ ಸಹಾಯದಿಂದ ಮುಚ್ಚಿ.
* ಬಳಿಕ ಇದನ್ನು ಸ್ಯಾಂಡ್ವಿಚ್ ಮೇಕರ್ ಅಥವಾ ಗ್ರಿಲ್ ಪ್ಯಾನ್ನಲ್ಲಿ ಇಟ್ಟು ಬಿಸಿಮಾಡಿಕೊಳ್ಳಿ.
* ಈಗ ಟೇಸ್ಟಿ ಮಶ್ರೂಮ್ ಸ್ಯಾಂಡ್ವಿಚ್ ತಿನ್ನಲು ರೆಡಿ.