ಸಾಮಾನ್ಯವಾಗಿ ಹಸಿ ಈರುಳ್ಳಿಯನ್ನು ಸಲಾಡ್’ನಂತೆ ತಿನ್ನುತ್ತಾರೆ. ಕೆಲವರಿಗೆ ಇದರ ಕಟುವಾದ ರುಚಿ ಮತ್ತು ಪರಿಮಳ ಇಷ್ಟವಾಗದಿದ್ದರೂ ಹಸಿ ಈರುಳ್ಳಿಯನ್ನು ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ.
ಬಿಳಿ ರಕ್ತ ಕಣಗಳ ರಚನೆ: ಹಸಿ ಈರುಳ್ಳಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುತ್ತದೆ. ಇದರೊಂದಿಗೆ ಶೀತ ಮತ್ತು ಜ್ವರದಂತಹ ರೋಗಗಳನ್ನು ತಡೆಯಬಹುದು. ಆದ್ದರಿಂದ, ನಿಮ್ಮ ಆಹಾರದಲ್ಲಿ ಹಸಿ ಈರುಳ್ಳಿಯನ್ನು ಸೇರಿಸಿ, ಇದು ದೇಹದಲ್ಲಿ ಬಿಳಿ ರಕ್ತ ಕಣಗಳ ರಚನೆಗೆ ಸಹಾಯ ಮಾಡುತ್ತದೆ.
ಜೀರ್ಣಕ್ರಿಯೆಗೆ ಸಹಕಾರಿ: ಹಸಿ ಈರುಳ್ಳಿಯಲ್ಲಿ ಫೈಬರ್ ಸಮೃದ್ಧವಾಗಿದೆ. ಜೀರ್ಣಕ್ರಿಯೆಗೆ ಇದು ಅವಶ್ಯಕ. ದೇಹದಿಂದ ತ್ಯಾಜ್ಯ ಉತ್ಪನ್ನಗಳನ್ನು ಹೊರಹಾಕಲು ಸಹಾಯ ಮಾಡುತ್ತದೆ. ಹಸಿ ಈರುಳ್ಳಿಯನ್ನು ತಿನ್ನುವುದರಿಂದ ಮಲಬದ್ಧತೆ ಮತ್ತು ಪೈಲ್ಸ್ನಂತಹ ಅನೇಕ ಕಾಯಿಲೆಗಳನ್ನು ತಪ್ಪಿಸಬಹುದು.
ಉರಿಯೂತ ನಿವಾರಕ ಗುಣ: ಹಸಿ ಈರುಳ್ಳಿ ಉರಿಯೂತ ನಿವಾರಕ ಗುಣಗಳನ್ನು ಹೊಂದಿದ್ದು, ದೇಹದಲ್ಲಿನ ಉರಿಯೂತದ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಸಂಧಿವಾತ, ಆಸ್ತಮಾ ಮತ್ತು ಬ್ರಾಂಕೈಟಿಸ್’ನಂತಹ ಪರಿಸ್ಥಿತಿಗಳನ್ನು ತಡೆಯುತ್ತದೆ.
ಮೂಳೆಗಳ ಆರೋಗ್ಯ: ಈರುಳ್ಳಿಯಲ್ಲಿ ಸಲ್ಫರ್ ಸಾಕಷ್ಟು ಪ್ರಮಾಣದಲ್ಲಿ ಕಂಡುಬರುತ್ತದೆ. ಇದು ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ. ಇದು ಆಸ್ಟಿಯೊಪೊರೋಸಿಸ್ ಅಪಾಯವನ್ನು ತಡೆಯಲು ಸಹ ಸಹಾಯ ಮಾಡುತ್ತದೆ.
ಬ್ಲಡ್ ಶುಗರ್ ನಿಯಂತ್ರಣ: ಹಸಿ ಈರುಳ್ಳಿ ಕ್ರೋಮಿಯಂ ಅನ್ನು ಹೊಂದಿರುತ್ತದೆ, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಹಸಿ ಈರುಳ್ಳಿ ತಿನ್ನುವುದರಿಂದ ಮಧುಮೇಹ ಬರುವ ಅಪಾಯ ಕಡಿಮೆಯಾಗುತ್ತದೆ.