ಸೌತೆಕಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಒಳ್ಳೆಯದು ಎಂದು ಹಲವರು ತಿಳಿದುಕೊಂಡಿರುತ್ತಾರೆ. ಕೆಲವರು ತಮ್ಮ ಡಯಟ್ಗೆಂದು ಸೌತೆಕಾಯಿ ತಿನ್ನುತ್ತಾರೆ. ಸೌತೆಕಾಯಿ ತಿನ್ನುವುದರಿಂದ ಒಳ್ಳೆಯದಾಗುತ್ತದೆ. ಸೌತೆಕಾಯಿ ಒಳ್ಳೆಯದು ಅಂತಾ ಹೆಚ್ಚಾಗಿ ಸೇವನೆ ಮಾಡಿದ್ರೆ ಅದು ನಿಮ್ಮ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಕೆಲವು ಜನರು ಡಯಟ್ ಎಂದು ದಿನಕ್ಕೆ 8 ರಿಂದ 10 ಸೌತೆಕಾಯಿ ತಿನ್ನುತ್ತಾರೆ. ಸೌತೆಕಾಯಿ ತಿನ್ನುವುದರಿಂದ ನಮ್ಮ ದೇಹಕ್ಕೆ ಒಳ್ಳೆಯದಾಗುತ್ತೆ. ಆದರೆ ಅವಶ್ಯಕ್ಕಿಂತ ಹೆಚ್ಚು ಸೌತೆಕಾಯಿ ತಿಂದರೆ ಅಮೃತವೂ ವಿಷವಾಗುತ್ತದೆ ಎನ್ನುವ ಗಾದೆ ಮಾತಿನಂತೆ ಸೌತೆಕಾಯಿ ಕೂಡ ವಿಷ ಆಗುತ್ತದೆ.
ರಾತ್ರಿ ಸಮಯದಲ್ಲಿ ಎಂದಿಗೂ ಸೌತೆಕಾಯಿ ತಿನ್ನಬೇಡಿ. ಬೆಳಗ್ಗೆ ಹೊತ್ತು ಸೌತೆಕಾಯಿ ತಿಂದರೆ ನಿಮ್ಮ ದೇಹಕ್ಕೆ ಅಧಿಕ ಲಾಭವಾಗುತ್ತದೆ. ಮಧ್ಯಾಹ್ನ ತಿಂದರೆ ಸಾಮಾನ್ಯವಾಗಿ ಒಳ್ಳೆಯದಾಗುತ್ತದೆ. ಆದರೆ ರಾತ್ರಿ ಸೌತೆಕಾಯಿ ಸೇವನೆ ಆರೋಗ್ಯಕ್ಕೆ ಹಾನಿಕಾರಕವಾಗುತ್ತದೆ. ಸೌತೆಕಾಯಿಯಲ್ಲಿ ಅತಿ ಕಡಿಮೆ ಪ್ರಮಾಣದಲ್ಲಿ ಕುಕುರ್ಬಿಟೈನ್ ಎಂಬ ವಿಷಕಾರಿ ಅಂಶವಿರುತ್ತದೆ. ನೀವು ಅವಶ್ಯಕ್ಕಿಂತ ಹೆಚ್ಚು ಸೌತೆಕಾಯಿ ತಿಂದರೆ ನಿಮ್ಮೆ ದೇಹದಲ್ಲಿ ಟಾಕ್ಸಿಕ್ ಅಂಶ ಸೇರುತ್ತದೆ.
ಇದರಿಂದ ನಿಮ್ಮ ಲಿವರ್, ಪ್ಯಾಂಕ್ರಿಯಾಟಿಕ್ ಮತ್ತು ಮೂತ್ರಪಿಂಡ ಊತವಾಗುತ್ತದೆ. ಹಾಗಾಗಿ ಸೌತೆಕಾಯಿಯನ್ನು ಮಿತಿಯಲ್ಲಿ ತಿಂದರೆ ಉತ್ತಮ. ಸೌತೆಕಾಯಿ ತಣ್ಣಗಿನ ಪದಾರ್ಥ. ನಿಮಗೆ ಕಫ, ಶೀತ, ನೆಗಡಿ ಅಥವಾ ಉಸಿರಾಟದ ಸಮಸ್ಯೆ ಇದ್ದರೆ ಸೌತೆಕಾಯಿ ತಿನ್ನಬೇಡಿ. ಸೌತೆಕಾಯಿಯನ್ನು ಮಿತವಾಗಿ ಸೇವನೆ ಮಾಡಿದ್ದಲ್ಲಿ ನಿಮ್ಮ ಆರೋಗ್ಯದ ಮೇಲೆ ಯಾವುದೇ ಅಡ್ಡ ಪರಿಣಾಮ ಬೀರುವುದಿಲ್ಲ.