ಬೆಂಗಳೂರು: ಭಾರತ್ ಇನ್ಫ್ರಾ ಎಕ್ಸ್ಪೋರ್ಟ್ಸ್ ಅಂಡ್ ಇಂಪೋರ್ಟ್ಸ್ ಸಂಸ್ಥೆಯ ಬೆಂಗಳೂರು ಹಾಗೂ ದಾವಣಗೆರೆ ಕಚೇರಿಗಳಲ್ಲಿ ಜಾರಿ ನಿರ್ದೇಶನಾಲಯ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸಿರುವ ಸಂಗತಿ ಬೆಳಕಿಗೆ ಬಂದಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ 113.38 ಕೋಟಿ ರೂ ಸಾಲ ಬಾಕಿ ಉಳಿಸಿಕೊಂಡ ಹಾಗೂ ಸಾಲದ ಹಣಕ್ಕಾಗಿ ಸುಳ್ಳು ದಾಖಲೆಗಳನ್ನು ಕೊಟ್ಟ ಆರೋಪ ಭಾರತ್ ಇನ್ಫ್ರಾ ಮೇಲಿದೆ. ಈ ಪ್ರಕರಣದ ಮೇಲೆ ಇಡಿ ಅಧಿಕಾರಿಗಳ ತಂಡಗಳು ಜೂನ್ 5ರಂದು ರೇಡ್ ನಡೆಸಿರುವುದು ತಿಳಿದುಬಂದಿದೆ.