ಬಳ್ಳಾರಿ:- ಕರ್ನಾಟಕದ ಹಿಂದುಳಿದ ವರ್ಗಗಳಿಗೆ ಸಂಬಂಧಿಸಿದ ವಾಲ್ಮಿಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ಚಾರ್ಜ್ಶೀಟ್ ಸಲ್ಲಿಕೆಯ ಸಮಯ ಸಮೀಪಿಸುತ್ತಿದೆ. ಈ ಸಂದರ್ಭದಲ್ಲಿ ಇಡಿ ಅಧಿಕಾರಿಗಳು ಮಾಜಿ ಸಚಿವ ನಾಗೇಂದ್ರ ಆಪ್ತರ ಮನೆಗಳ ಮೇಲೆ ಬಳ್ಳಾರಿಯಲ್ಲಿ ದಾಳಿ ನಡೆಸಿದ್ದಾರೆ.
ನಾಗೇಂದ್ರ ಸಂಬಂಧಿ ಎರ್ರಿಸ್ವಾಮಿ ಮನೆ ಸೇರಿದಂತೆ ಕೆಲ ಆಪ್ತ ಸಹಾಯಕರು ಮತ್ತು ಆಪ್ತರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಪ್ರಕರಣದಲ್ಲಿ ಇಡಿ ಜಾರ್ಜ್ಶೀಟ್ ಸಲ್ಲಿಕೆಗೆ ಸಮಯ ಹತ್ತಿರ ಬಂದಿರುವುದರಿಂದ ಅಧಿಕಾರಿಗಳು ದಾಳಿ ಚುರುಕುಗೊಳಿಸಿದ್ದಾರೆ ಎನ್ನಲಾಗಿದೆ.
ಹಗರಣ ಸಂಬಂಧ ತನಿಖೆ ಚುರುಕುಗೊಳಿಸಿರುವ ಅಧಿಕಾರಿಗಳು ಕಳೆದ ತಿಂಗಳಷ್ಟೇ ಬೆಂಗಳೂರು, ರಾಯಚೂರು, ಬಳ್ಳಾರಿ ಸೇರಿದಂತೆ ರಾಜ್ಯದ ಅನೇಕ ಕಡೆಗಳಲ್ಲಿ ದಾಳಿ ನಡೆಸಿ ಮಾಹಿತಿ ಕಲೆಹಾಕಿದ್ದರು. ರಾಯಚೂರು ನಗರದ ಆಶಾಪುರ ರಸ್ತೆಯಲ್ಲಿರುವ ಗಸನಗೌಡ ದದ್ದಲ್ ನಿವಾಸ, ಬಳ್ಳಾರಿಯ ನೆಹರು ಕಾಲೋನಿಯಲ್ಲಿರುವ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾಗೇಂದ್ರ ಮನೆ ಮೇಲೂ ದಾಳಿ ನಡೆಸಿದ್ದರು ಎನ್ನಲಾಗಿದೆ.