ಬೆಂಗಳೂರು ;- ವಿಪಕ್ಷ ನಾಯಕನ ಆಯ್ಕೆ ಕಸರತ್ತು ಬೆಂಗಳೂರಿಗೆ ಶಿಫ್ಟ್ ಆಗಿದೆ. ಇದಕ್ಕಾಗಿಯೇ ಕೇಂದ್ರದ ಇಬ್ಬರು ವೀಕ್ಷಕರು ಆಗಮಿಸುತ್ತಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ದೆಹಲಿ ಭೇಟಿ ವೇಳೆಯಲ್ಲಿ ಕರ್ನಾಟಕದ ವಿರೋಧ ಪಕ್ಷದ ನಾಯಕನ ಘೋಷಣೆಯಾಗಲಿದೆ ಎಂಬ ನಿರೀಕ್ಷೆ ಹುಸಿಯಾಗಿದೆ.
ನಿನ್ನೆ ದೆಹಲಿಯಲ್ಲಿ ನಡೆದ ಸರಣಿ ಸಭೆಗಳ ಬಳಿಕವೂ ವಿರೋಧ ಪಕ್ಷದ ನಾಯಕನ ಆಯ್ಕೆ ಬಗ್ಗೆ ಒಮ್ಮತ ಮೂಡಿಲ್ಲ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ನಿವಾಸದಲ್ಲಿ ನಡೆದ ಸರಣಿ ಸಭೆಗಳ ಬಳಿಕವು ಯಾವುದೇ ಘೋಷಣೆಯಾಗಿಲ್ಲ.
ಕರ್ನಾಟಕದಲ್ಲಿ ಬಜೆಟ್ ಅಧಿವೇಶನ ಸೋಮವಾರ ಆರಂಭವಾಗಲಿದೆ. ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಇಂದು ಭಾಷಣ ಮಾಡಲಿದ್ದಾರೆ. ಆದರೆ ವಿರೋಧ ಪಕ್ಷದ ನಾಯಕನೇ ಇಲ್ಲದೇ ಪ್ರತಿಪಕ್ಷ ಬಿಜೆಪಿ ಕಲಾಪವನ್ನು ಎದುರಿಸಲಿದೆ. ಸಂಜೆಯ ವೇಳೆಗೆ ಶಾಸಕಾಂಗ ಪಕ್ಷದ ಸಭೆ ನಡೆಸಿ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ.