ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯ(Karnataka Election) ಫಲಿತಾಂಶ ನಾಳೆ ಪ್ರಕಟವಾಗಲಿದ್ದು, ಈ ನಡುವೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನಿವಾಸಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ಮಹತ್ವದ ಚರ್ಚೆ ನಡೆಸಿದ್ದಾರೆ. ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ(BS Yediyurappa) ಅವರ ಕಾವೇರಿ ನಿವಾಸಕ್ಕೆ ಸಿಎಂ ಬೊಮ್ಮಾಯಿ(Bommai) ಭೇಟಿಯಾಗಿದ್ದು, ಮಹತ್ವದ ಮಾತುಕತೆ ನಡೆಸಿದ್ದಾರೆ.
ನಾಳೆಯ ಚುನಾವಣೆ ಫಲಿತಾಂಶ ಬಳಿಕ ಯಾವ ರೀತಿ ರಣತಂತ್ರ ರೂಪಿಸಬೇಕು ಎಂಬುದರ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಬಿ.ಎಸ್. ಯಡಿಯೂರಪ್ಪ ಅವರ ಭೇಟಿಗೂ ಮುನ್ನ ಮಾತನಾಡಿದ ಸಿಎಂ ಬೊಮ್ಮಾಯಿ, ಅತಂತ್ರ ವಿಧಾನಸಭೆಗೆ ಯಾವುದೇ ಅವಕಾಶವಿಲ್ಲ, ನಾವು ಆರಾಮವಾಗಿ ಸರ್ಕಾರ ರಚಿಸಲಿದ್ದೇವೆ. ಡಿ.ಕೆ.ಶಿವಕುಮಾರ್ ನಾಳೆಯವರೆಗೆ ತಮ್ಮ 141 ಸ್ಥಾನಗಳ ಬಗ್ಗೆ ಸಂತೋಷವಾಗಿರಲಿ. ಶಾಸಕಾಂಗ ಪಕ್ಷದ ಸಭೆ ಕರೆದು ಸಿಎಂ ಅಭ್ಯರ್ಥಿ ಯಾರು ಎಂಬುದನ್ನು ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.