ಶಿಗ್ಗಾಂವಿ: ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ ಹಾಗೂ ಜನ ಬಿಲ್ ಕಟ್ಟದ ವಿಚಾರವಾಗಿ ಕಿವಿಮಾತು ಹೇಳುವ ಮೂಲಕ ಸರ್ಕಾರಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ(Former CM Bommai) ಎಚ್ಚರಿಕೆ ನೀಡಿದ್ದಾರೆ. ಶುಲ್ಕ ಪಾವತಿಸದಿದ್ದರೆ ವಿದ್ಯುತ್ ಪೂರೈಕೆ ಆಗುವುದಿಲ್ಲ. ರಾಜ್ಯದಲ್ಲಿ ಮಳೆ ಇಲ್ಲ, ಬರ ಬಂದಿದೆ. ಜನರಿಗೆ ಕುಡಿಯುವ ನೀರು, ಕೃಷಿಗೆ ನೀರು ಇಲ್ಲದೇ ಸಮಸ್ಯೆ ಆಗಿದೆ.
ಕುಡಿಯುವ ನೀರು ಸರಬರಾಜು ಆಗಲು ವಿದ್ಯುತ್ ಬೇಕು. ಕರೆಂಟ್ ನೀಡದಿದ್ದರೆ ಕುಡಿಯುವ ನೀರಿಗೆ ಹಾಹಾಕಾರ ಆಗುತ್ತದೆ. ಹೈಡ್ರೋ ಎಲೆಕ್ಟ್ರಿಕ್ ಪವರ್ ಕೊರತೆ ಇದೆ. ವಿದ್ಯುತ್ ಇಲಾಖೆಯ ಎಲ್ಲಾ ನಿಗಮಗಳಿಗೆ ಹಣ ಬಿಡುಗಡೆ ಮಾಡಬೇಕು. ಸರಿಯಾದ ಕ್ರಮ ತೆಗೆದುಕೊಳ್ಳದಿದ್ದರೆ ವಿದ್ಯುತ್ ಶಕ್ತಿಯ ಕ್ಷಾಮ ಎದುರಾಗಲಿದೆ ಎಂದು ಶಿಗ್ಗಾಂವಿ ತಾಲೂಕಿನ ಮಡ್ಲಿ ಗ್ರಾಮದಲ್ಲಿ ಹೇಳಿದರು.