ಬೆಂಗಳೂರು:– ಸಿಎಂ ಸಿದ್ದರಾಮಯ್ಯ ಅವರು ಗುಡ್ ನ್ಯೂಸ್ ನೀಡಿದ್ದು, ರಾಜ್ಯಾದ್ಯಂತ 600 ಇಂದಿರಾ ಕ್ಯಾಂಟೀನ್ಗಳ ಸ್ಥಾಪನೆ ಮಾಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.
ಈ ಘೋಷಣೆಗೂ ಮುನ್ನ ಏರ್ಪೋರ್ಟಲ್ಲೂ ಇಂದಿರಾ ಕ್ಯಾಂಟೀನ್ ಅನ್ನು ಸಿಎಂ ಸೋಮವಾರ ಉದ್ಘಾಟಿಸಿದರು.ರಾಜ್ಯದಲ್ಲಿ ಈಗಾಗಲೇ ಆರಂಭವಾದ ಇಂದಿರಾ ಕ್ಯಾಂಟೀನ್ಗಳನ್ನು ಪುನರಾರಂಭಗೊಳಿಸಿ, 188 ಹೊಸ ಇಂದಿರಾ ಕ್ಯಾಂಟೀನ್ಗಳನ್ನು ಪ್ರಾರಂಭಿಸುತ್ತಿದ್ದೇವೆ.
ಈ ಪೈಕಿ ಈಗಾಗಲೇ 40 ಸಿದ್ದವಾಗಿವೆ ಎಂದು ಸಿಎಂ ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಅವರು ಮಾತನಾಡಿದರು. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಬಾರದೆಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು.ಬಡವರಿಗೆ ಕಡಿಮೆ ದರಗಳಲ್ಲಿ ಊಟ ತಿಂಡಿ ದೊರೆಯಬೇಕೆನ್ನುವುದು ಇದರ ಉದ್ದೇಶ. ಬೆಳಗಿನ ಉಪಾಹಾರ 5 ರೂಪಾಯಿ.
ಮಧ್ಯಾಹ್ನ ಮತ್ತು ರಾತ್ರಿ ಊಟ 10 ರೂಪಾಯಿಗೆ ದೊರೆಯಲಿದೆ. ಆಹಾರದ ಮೆನು ಕೂಡ ಬದಲಾಯಿಸಲಾಗಿದೆ. ಕುಳಿತು ತಿನ್ನಲು ಅನುಕೂಲವಾಗಲೆಮದು ಡೈನಿಂಗ್ ಹಾಲ್ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಂಗಳೂರಿನ ಪ್ರತಿ ವಾರ್ಡ್ನಲ್ಲಿ ಹಾಗೂ ರಾಜ್ಯದಿತರೆಡೆಗಳಲ್ಲಿ ಕೂಡ ಇಂದಿರಾ ಕ್ಯಾಂಟೀನ್ ಸ್ಥಾಪಿಸಲಾಗಿದೆ.