ಬೆಂಗಳೂರು: ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ(Karnataka Election 2023) ರ ರಾಜ್ಯ ಕಾಂಗ್ರೆಸ್ ನಾಯಕರ ಸಭೆ ನಡೆಯಿತು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಂಸದ ಡಿ ಕೆ ಸುರೇಶ್, ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಭಾಗಿಯಾಗಿದ್ದರು. ಬಹಳ ಮಹತ್ವ ಪಡೆದುಕೊಂಡ ತುರ್ತು ಸಭೆಯಲ್ಲಿ ಹಲವು ವಿಚಾರಗಳ ಕುರಿತು ಚರ್ಚೆ ನಡೆದಿದೆ. 224 ಕ್ಷೇತ್ರಗಳ ಅಭ್ಯರ್ಥಿಗಳಿಗೆ ಖುದ್ದು ಫೋನ್ ಮಾಡಿ ಮಾಹಿತಿ ಪಡೆದುಕೊಳ್ಳುತ್ತಿರುವ ಸುರ್ಜೇವಾಲಾ,
ಆಯಾ ಕ್ಷೇತ್ರಗಳಲ್ಲಿ ಆಗಿರುವಂತಹ ಮತದಾನದ ಮಾಹಿತಿ ಪಡೆದಿದ್ದಾರೆ. ಈಗಾಗಲೆ ಸಿದ್ದರಾಮಯ್ಯ ಜೊತೆ ಕೆಲ ಕಾಲ ಚರ್ಚೆ ನಡೆಸಿರುವ ಸುರ್ಜೇವಾಲಾ, ಎಲ್ಲಾ ಕ್ಷೇತ್ರಗಳಲ್ಲಿನ ಮತದಾನದ ಮಾಹಿತಿ ಸಂಗ್ರಹಿಸಿ ದಾಖಲಿಸಿಕೊಳ್ಳುವ ಕಾರ್ಯ ಮಾಡುತ್ತಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಮುಕ್ತಾಯವಾಗಿದೆ. ಇದೀಗ ಫಲಿತಾಂಶದ ಬಗ್ಗೆ ವಿವಿಧ ಎಕ್ಸಿಟ್ ಪೋಲ್ಗಳು ಪ್ರಕಟವಾಗಿವೆ. ಈ ಬಗ್ಗೆ ಪರ ಮತ್ತು ವಿರೋಧ ಚರ್ಚೆ ಆಗುತ್ತಿದೆ. ಇದರ ಜೊತೆಗೆ ಕಳೆದ 2018ರ ಚುನಾವಣಾ ಸಂದರ್ಭದಲ್ಲಿ ಚುನಾವಣೋತ್ತರ ಸಮೀಕ್ಷೆಗಳ ಭವಿಷ್ಯ ಏನಾಗಿತ್ತು ಎಂಬ ಕುರಿತು ಕೂಡಾ ಚರ್ಚೆ ಆಗಿದೆ.