ಸ್ಯಾಂಡಲ್ವುಡ್ ನಟ ಕಮ್ ನಿರ್ದೇಶಕ ದ್ವಾರಕೀಶ್ ತಮ್ಮ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ದ್ವಾರಕೀಶ್ ನೇತ್ರದಾನ ಮಾಡುವ ಮೂಲಕ ಯುವಜನತೆಗೆ ಮಾದರಿಯಾಗಿದ್ದಾರೆ. ಡಾ.ರಾಜ್ಕುಮಾರ್, ಪುನೀತ್ ರಾಜ್ಕುಮಾರ್ ನೇತ್ರದಾನ ಮಾಡಿದ್ದರು. ಈಗ ದ್ವಾರಕೀಶ್ ಕೂಡ ತಮ್ಮ ಸಾವಿನ ನಂತರ ನೇತ್ರ ದಾನ ಮಾಡುವ ಮೂಲಕ ಇತರರ ಬಾಳಿಗೆ ಬೆಳಕಾಗಿದ್ದಾರೆ.
ದ್ವಾರಕೀಶ್ ಕಣ್ಣನ್ನು ನಾರಾಯಣ ನೇತ್ರಾಲಯಕ್ಕೆ ದಾನ ಮಾಡಿದ್ದಾರೆ. ಕುಟುಂಬದ ಸಮ್ಮತಿಯ ಮೇರೆಗೆ ಡಾ.ಶೈಲಜಾ ನೇತೃತ್ವದಲ್ಲಿ ನೇತ್ರ ಕಸಿ ಕಾರ್ಯ ನಡೆದಿದೆ. ಈ ಬಗ್ಗೆ ವೈದ್ಯೆ ಶೈಲಜಾ ಮಾತನಾಡಿದ್ದಾರೆ.
ದ್ವಾರಕೀಶ್ ಅವರ ಕಣ್ಣನ್ನು ಇಂದು ಪರೀಕ್ಷೆ ಮಾಡಲಾಗುತ್ತದೆ. ಆ ನಂತರ ಇಂದೆ ಇನ್ನೊಬ್ಬರಿಗೆ ಕಣ್ಣು ಹಾಕಲಾಗುತ್ತದೆ. ಕಣ್ಣು ದಾನದಿಂದ ಸಮಾಜಕ್ಕೆ ಕೊಟ್ಟಿರುವ ಕೊಡುಗೆಯಾಗಿದೆ. ಇದರಿಂದ ಇಬ್ಬರಿಗೆ ಕಣ್ಣು ಬರುತ್ತದೆ ಎಂದು ಡಾ.ಶೈಲಜಾ ಪ್ರತಿಕ್ರಿಯೆ ನೀಡಿದ್ದಾರೆ.
ದ್ವಾರಕೀಶ್ ಅವರ ಮರಣದ ನಂತರ ಕುಟುಂಬಸ್ಥರಿಗೆ ಕರೆ ಮಾಡಿದಾಗ 10 ನಿಮಿಷದಲ್ಲಿ ನೇತ್ರದಾನ ಮಾಡಲು ಅನುಮತಿ ನೀಡಿದರು. ಮೃತಪಟ್ಟ 14 ಘಂಟೆಯೊಳಗೆ ಕಣ್ಣು ದಾನ ಮಾಡಬಹುದು. ಸಂಪೂರ್ಣ ಕಣ್ಣುನ್ನು ನಾವು ತೆಗೆದುಕೊಂಡಿದ್ದೇವೆ. ಇದರಿಂದ 10 ಜನಕ್ಕೆ ಈ ಕಣ್ಣುಗಳಿಂದ ಅನುಕೂಲವಾಗುತ್ತದೆ. ಪಟಾಕಿಯಲ್ಲಿ ಕಣ್ಣಿಗೆ ಹಾನಿಯಾದವರಿಗೆ ಹಾಗೂ ಕಂಪ್ಲೀಟ್ ಅಂಧತ್ವ ಇರುವವರಿಗೆ ಅನುಕೂಲವಾಗುತ್ತದೆ ಎಂದು ಡಾ.ಶೈಲಜಾ ಹೇಳಿದ್ದಾರೆ.