ಭಾರತೀಯ ಜನತಾ ಪಕ್ಷದ ವಿಚಾರವಾಗಿ ಹೆಚ್ಚು ತಲೆಕೆಡಿಸಿಕೊಳ್ಳಲ್ಲ ಎಂದು ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಬಿಜೆಪಿಯ ಪ್ರತಿಯೊಬ್ಬ ನಾಯಕರೂ ನಮ್ಮ ಬಗ್ಗೆ ಮಾತನಾಡುತ್ತಾರೆ.
ಬಿಜೆಪಿಯವರಿಗೆ ನಮ್ಮ ಪಕ್ಷದ ಮೇಲೆ ಹೆಚ್ಚು ಆಸಕ್ತಿ ಇದ್ದಂತೆ ಕಾಣ್ತಿದೆ. ಅವರೆಲ್ಲರೂ ನಮ್ಮ ಪಕ್ಷಕ್ಕೆ ಬರ್ತಾರೇನೋ. ಅದಕ್ಕಾಗಿ ನಮ್ಮ ಪಕ್ಷದ ಬಗ್ಗೆ ಹೆಚ್ಚು ಚರ್ಚೆ ನಡೆಸುತ್ತಿದ್ದಾರೇನೋ? ಎಂದು ಬೆಂಗಳೂರಿನಲ್ಲಿ ಬಿಜೆಪಿ ವಿರುದ್ಧ ಸಚಿವ ಡಾ.ಜಿ.ಪರಮೇಶ್ವರ್ ಕಿಡಿಕಾರಿದರು.