ಬೆಂಗಳೂರು: ವಿಧಾನಸಭೆಯಲ್ಲಿ ಬುಧವಾರ ನಡೆದ ಘಟನೆ ನಾವೆಲ್ಲ ತಲೆ ತಗ್ಗಿಸುವಂತಹ ಘಟನೆ ಆಗಿದೆ ಎಂದು ಪರಿಷತ್ ಸದಸ್ಯ ಟಿ.ಎ. ಶರವಣ ಕಳವಳ ವ್ಯಕ್ತಪಡಿಸಿದರು.
ವಿಧಾನಸೌಧದಲ್ಲಿ (Vidhana Soudha) ಮಾತನಾಡಿದ ಅವರು, ನಿನ್ನೆ ನಡೆದ ಘಟನೆ ನಾವೆಲ್ಲ ತಲೆ ತಗ್ಗಿಸುವ ಘಟನೆ ಆಗಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರೂ ಹೋರಾಟ ಮಾಡುವುದಕ್ಕೆ ಸ್ವತಂತ್ರರಾಗಿದ್ದಾರೆ. ಆದರೆ ಇವರು ಮಾರ್ಷಲ್ ಗಳ ಕೈಲಿ ಶಾಸಕರನ್ನ ಹೊರಹಾಕಿಸಿದ್ದು ಅತ್ಯಂತ ಖಂಡನೀಯ ಎಂದು ಹೇಳಿದರು.
ಹಾಗೆ ಸಭಾಪತಿ ಸ್ಥಾನದಲ್ಲಿರುವವರು ಅದರ ಘನತೆಯನ್ನು ಕಾಪಾಡಬೇಕು, ಧ್ವನಿಯನ್ನು ಹತ್ತಿಕ್ಕುವ ಕೆಲಸ ಮಾಡಬಾರದು ಆದರೆ ಈ ಸರ್ಕಾರ ಅದನ್ನ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಜನರೇ ಇವರಿಗೆ ಬುದ್ಧಿ ಕಲಿಸುತ್ತಾರೆ ಎಂದು ಹೇಳಿದರು.