ಬೆಂಗಳೂರು: ಗೋವುಗಳನ್ನು ಏಕೆ ಕಡಿಯಬಾರದು ಎಂಬ ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರ ಹೇಳಿಕೆಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಸಚಿವರ ಹೇಳಿಕೆಯಿಂದ ರಾಜ್ಯದಲ್ಲಿ ಗೋವು ಕಳ್ಳ ಸಾಗಾಣಿಕೆ, ಸಾಮೂಹಿಕ ಗೋಹತ್ಯೆ ಮಾಡುವ ಕಾನೂನು ಬಾಹಿರ ಕಾರ್ಖಾನೆಗಳು ತಲೆ ಎತ್ತಲಿವೆ. ನಮ್ಮ ಸರಕಾರದ ಅವಧಿಯಲ್ಲಿ ಕಾನೂನು ಬಾಹಿರ ಕಸಾಯಿಖಾನೆ ತಡೆಗಟ್ಟಲು ಕಾನೂನು ತರಲಾಗಿದೆ. ಹೊಸ ಕಾಯಿದೆ ತಂದಿಲ್ಲ. ಇರುವ ಕಾನೂನಿಗೇ ಬಲ ತುಂಬಿದ್ದೇವೆ. ಈ ರೀತಿಯ ಹೇಳಿಕೆ ನೀಡುವ ಮೊದಲು ಸಚಿವರು ಯೋಚಿಸಬೇಕು. ಈ ಬಗ್ಗೆ ಮುಖ್ಯಮಂತ್ರಿಗಳು ಸೂಕ್ತ ಸಲಹೆ ನೀಡುವ ಅವಶ್ಯಕತೆಯಿದೆ,” ಎಂದಿದ್ದಾರೆ.
ಭಾರತೀಯರಾದ ನಮಗೆ ಗೋವಿನೊಂದಿಗೆ ಭಾವನಾತ್ಮಕ ಸಂಬಂಧವಿದೆ. ತಾಯಿ ಸ್ಥಾನದಲ್ಲಿ ಪೂಜಿಸುಧಿತ್ತೇವೆ. ಸಚಿವ ವೆಂಕಟೇಶ್ ಯಾರ ಓಲೈಕೆಗಾಗಿ ಈ ರೀತಿಯ ಹೇಳಿಕೆ ನೀಡಿದ್ದಾರೆ? ಗೋಹತ್ಯೆ ನಿಷೇಧವನ್ನು ಪ್ರಥಮವಾಗಿ ಪ್ರತಿಪಾದಿಸಿದ್ದು ಗಾಂಧೀಜಿ. ಅವರು ಪ್ರತಿಪಾದಿಸಿದ ಗೋಹತ್ಯೆ ನಿಷೇಧವನ್ನು 1960ರ ದಶಕದಲ್ಲಿ ಹಲವು ರಾಜ್ಯಗಳಲ್ಲಿ ಕಾನೂನಾಗಿ ತರಲಾಗಿದೆ,” ಎಂದಿದ್ದಾರೆ.