ಬಳ್ಳಾರಿ: ರಾಜ್ಯ ರಾಜಕೀಯದಲ್ಲಿ ಚುನಾವಣಾ ಹೊತ್ತಿನಲ್ಲಿ ಆಡಳಿತಾರೂಢ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ಗೆ ಶಾಕ್ ಮೇಲೆ ಶಾಕ್ ಗಳನ್ನು ನಾಯಕರು ನೀಡುತ್ತಿದ್ದಾರೆ. ಈಗಾಗಲೇ ಹಲವರು ಟಿಕೆಟ್ ಅಸಮಾಧಾನದಿಂದ ಪಕ್ಷ ತೊರೆದಿದ್ದರು. ಈ ಸರಣಿ ಮತ್ತೆ ಮುಂದುವರೆಯಲಿದೆ ಎನ್ನಲಾಗುತ್ತಿದೆ.
ಕಾಂಗ್ರೆಸ್ ಟಿಕೆಟ್ ವಂಚಿತ ಮಾಜಿ ಶಾಸಕ ಅನಿಲ್ ಲಾಡ್ ಕೈ ಪಕ್ಷಕ್ಕೆ ಗುಡ್ ಬೈ ಹೇಳಲಿದ್ದಾರೆ ಎನ್ನಲಾಗುತ್ತಿದೆ.
ಬಳ್ಳಾರಿ ನಗರದಿಂದ ಕಾಂಗ್ರೆಸ್ ಪಕ್ಷದ ಟಿಕೆಟ್ ನಿರೀಕ್ಷೆಯಲ್ಲಿ ಮಾಜಿ ಶಾಸಕ ಅನಿಲ್ ಲಾಡ್ ಇದ್ದರು. ಆದ್ರೇ ಕಾಂಗ್ರೆಸ್ ಪಕ್ಷದ ಟಿಕೆಟ್ ಅವರಿಗೆ ಕೈ ತಪ್ಪಿತ್ತು. ಈ ಕಾರಣದಿಂದಲೇ ಬಳ್ಳಾರಿ ನಗರದಲ್ಲಿ ಕಾಂಗ್ರೆಸ್ ಬಂಡಾಯದ ಬಿಸಿ ಎದುರಾಗಿದೆ.
ಮಾಜಿ ಶಾಸಕ ಅನಿಲ್ ಲಾಡ್ ಅವರು ಬಳ್ಳಾರಿ ನಗರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಕಾಂಗ್ರೆಸ್ ಪಕ್ಷಕ್ಕೆ ಅನಿಲ್ ಲಾಡ್ ರಾಜೀನಾಮೆಯನ್ನು ಕೂಡ ನೀಡಲಿದ್ದಾರೆ ಎನ್ನಲಾಗುತ್ತಿದೆ. ಆ ಬಗ್ಗೆ ಶೀಘ್ರವೇ ನಿರ್ಧಾರವನ್ನು ಅವರು ಪ್ರಕಟಿಸಲಿದ್ದಾರೆ ಎನ್ನಲಾಗುತ್ತಿದೆ.