ಮಹಿಳಾ ಪ್ರೀಮಿಯರ್ ಲೀಗ್ 2024 ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂಬೈ ವಿರುದ್ಧ ರೋಚಕ ಗೆಲುವು ದಾಖಲಿಸಿತು.
ಈ ಮೂಲಕ ಆರ್ಸಿಬಿ ಚೊಚ್ಚಲ ಬಾರಿಗೆ ಫೈನಲ್ ಹಂತಕ್ಕೆ ಎಂಟ್ರಿಕೊಟ್ಟಿದೆ. ಈ ಮೂಲಕ ರವಿವಾರ ಮಾರ್ಚ್ 17ರಂದು ನಡೆಯಲಿರುವ ಡಬ್ಲ್ಯೂಪಿಎಲ್ 2024ರ ಫೈನಲ್ ಪಂದ್ಯದಲ್ಲಿ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡವು ಸೆಣಸಾಡಲಿದೆ.
ಈ ಮೂಲಕ ಆರ್ಸಿಬಿ ಕಪ್ ಗೆಲ್ಲುವ ಕನಸು ಜೀವಂತವಾಗಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಆರ್ಸಿಬಿ ತಂಡ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಳೆದುಕೊಂಡು ಸಂಕಷ್ಟ ಅನುಭಿಸುವ ಮೂಲಕ 20 ಓವರ್ಗೆ 136 ರನ್ ಗಳಿಸಿತು. ಈ ಸುಲಭ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡವು ನಿಗದಿತ 20 ಓವರ್ಗೆ 6 ವಿಕೆಟ್ ನಷ್ಟಕ್ಕೆ 130 ರನ್ ಗಹಳಿಸುವ ಮೂಲಕ 5 ರನ್ ಗಳಿಂದ ಸೋಲನ್ನಪ್ಪಿತು.
ಇನ್ನು, ಕಡಿಮೆ ಸ್ಕೋರ್ ಪಂದ್ಯವನ್ನು ಗೆಲ್ಲುವಲ್ಲಿ ಆರ್ಸಿಬಿ ಬೌಲರ್ ಗಳ ಪಾತ್ರ ಪ್ರಮುಖವಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕನ್ನಡತಿ ಶ್ರೇಯಾಂಕ ಪಾಟೀಲ್ 4 ಓವರ್ಗೆ 16 ರನ್ ನೀಡಿ 2 ವಿಕೆಟ್ ಪಡೆದರೆ, ಎಲ್ಲಿಸ್ ಪೆರ್ರಿ 1 ವಿಕೆಟ್, ಸೋಫಿ ಮೊಲಿನೆಕ್ಸ್ 1 ವಿಕೆಟ್, ಜಾರ್ಜಿಯಾ 1 ವಿಕೆಟ್, ಶೋಭನಾ ಆಶಾ 1 ವಿಕೆಟ್ ಪಡೆದು ತಂಡ ಫೈನಲ್ಗೆ ಲಗ್ಗೆಯಿಡುವಲ್ಲಿ ಪ್ರಮುಖಪಾತ್ರವಹಿಸಿದರು.