ಬೆಂಗಳೂರು:- ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದೆ. ಇನ್ನು ಕಲಬುರಗಿ, ಬಾಗಲಕೋಟೆ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಏಪ್ರಿಲ್ 3 ರಿಂದ 5ರ ವರೆಗೆ ಉಷ್ಣ ಹವೆ ಬೀಸಲಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿದಿನ ತಾಪಮಾನ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುತ್ತಿದೆ.
ಮಾರ್ಚ್ 31 ರಂದು ಕಲಬುರಗಿ ಜಿಲ್ಲೆಯಲ್ಲಿ ಅತ್ಯಧಿಕ 41.4 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಅತ್ಯಂತ ಕಡಿಮೆ 17.08 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ರಾಜ್ಯದ 11 ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ದಾಟಿದೆ.
ಮುಂದಿನ 24 ಗಂಟೆ ಬೆಂಗಳೂರಿನಲ್ಲಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ