ಹೊಸದಿಲ್ಲಿ: ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ 3 ಟಿ20 ಹಾಗೂ 5 ಏಕದಿನ ಪಂದ್ಯಗಳ ಸರಣಿಗಳಿಗೆ ಶುಕ್ರವಾರ (ಆಸ್ಟ್ರೇಲಿಯಾ 18) ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿಯು ತಂಡವನ್ನು ಪ್ರಕಟಿಸಿದ್ದು, ವಿವಿಧ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಅನುಭವಿ ಆಟಗಾರರಾದ ಸ್ಟೀವನ್ ಸ್ಮಿತ್ ಹಾಗೂ ಮಿಚೆಲ್ ಸ್ಟಾರ್ಕ್ ಗೆ ವಿಶ್ರಾಂತಿ ನೀಡಿದ್ದರೆ, ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಟಿ20 ಸರಣಿಯಿಂದ ಹೊರಗುಳಿದಿದ್ದು, ಏಕದಿನ ಸರಣಿಯಲ್ಲಿ ಸ್ಥಾನ ಪಡೆದಿದ್ದಾರೆ.
ಭಾರತದ ಆತಿಥ್ಯದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಯ ದೃಷ್ಟಿಯಿಂದ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾಕ್ಕೆ ಈ ಸರಣಿ ಮಹತ್ತರವಾಗಿದ್ದು, ಕಾಂಗರೂ ಪಡೆಗೆ ಈ ಹಿಂದೆ ಅದ್ಭುತ ಕೊಡುಗೆ ನೀಡಿರುವ ಸ್ಟೀವನ್ ಸ್ಮಿತ್ ಹಾಗೂ ವೇಗಿ ಮಿಚೆಲ್ ಸ್ಟಾರ್ಕ್ ತಂಡದಿಂದ ಹೊರಗುಳಿದಿದ್ದು ಆಘಾತ ಉಂಟಾಗಿದೆ.
ಲಾಬುಶೇನ್ ಗೆ ಅವಕಾಶ
ಎಡಗೈ ಮಣಿಕಟ್ಟಿನ ಸ್ನಾಯುರಜ್ಜು ಗಾಯದಿಂದ ಬಳಲುತ್ತಿರುವ ಸ್ಟೀವ್ ಸ್ಮಿತ್ಗೆ 4 ವಾರಗಳ ಕಾಲ ವಿಶ್ರಾಂತಿಯ ಅವಶ್ಯಕತೆ ಇದ್ದು, ಕ್ರಿಕೆಟ್ ಅಂಗಳದಿಂದ ದೂರವಿದ್ದರೂ ಭಾರತದ ಆತಿಥ್ಯದಲ್ಲಿ ನಡೆಯಲಿರುವ ಐಸಿಸಿ ಆಯೋಜನೆಯ ಏಕದಿನ ವಿಶ್ವಕಪ್ ಟೂರ್ನಿಯ ವೇಳೆಗೆ ಪೂರ್ಣ ಪ್ರಮಾಣದ ಫಿಟ್ನೆಸ್ ಹೊಂದಿ ತಂಡಕ್ಕೆ ಮರಳುವ ವಿಶ್ವಾಸವನ್ನು ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ವ್ಯಕ್ತಪಡಿಸಿದೆ.
ದಕ್ಷಿಣ ಆಫ್ರಿಕಾದ ಏಕದಿನ ಸರಣಿಯಿಂದ ಸ್ಟೀವನ್ ಸ್ಮಿತ್ ಹೊರಗುಳಿದಿದ್ದು, ಅವರ ಜಾಗದಲ್ಲಿ ಆಡುವ ಅವಕಾಶವನ್ನು ಮಾರ್ನಸ್ ಲಾಬುಶೇನ್ ಪಡೆದಿದ್ದಾರೆ. ಏಕದಿನ ವಿಶ್ವಕಪ್ ಟೂರ್ನಿಗೆ ಕ್ರಿಕೆಟ್ ಆಸ್ಟ್ರೇಲಿಯಾ ಪ್ರಕಟಿಸಿರುವ ಸಂಭಾವ್ಯ ಪಟ್ಟಿಯಲ್ಲಿ ಸ್ಥಾನ ಕಳೆದುಕೊಂಡಿರುವ ಲಾಬುಶೇನ್ ದಕ್ಷಿಣ ಆಫ್ರಿಕಾದ ಸರಣಿಯಲ್ಲಿ ಫಾರ್ಮ್ ಕಂಡುಕೊಂಡರೆ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವ ಅವಕಾಶ ಸಿಗಲಿದೆ. ಇನ್ನು ಟಿ20 ಸರಣಿಯಲ್ಲಿ ಸ್ಟೀವನ್ ಸ್ಮಿತ್ ಸ್ಥಾನವನ್ನು ಆಶ್ಟನ್ ಟರ್ನರ್ ತುಂಬಲಿದ್ದು, ಇನಿಂಗ್ಸ್ ಆರಂಭಿಸುವ ಸಾಧ್ಯತೆಗಳಿವೆ.
ಆಗಸ್ಟ್ 30 ರಿಂದ ಸರಣಿ ಚಾಲನೆ
ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ನಡುವೆ ನಡೆಯಲಿರುವ 3 ಪಂದ್ಯಗಳ ಟಿ20 ಸರಣಿಯು ಆಗಸ್ಟ್ 30 ರಿಂದ ಸೆಪ್ಟೆಂಬರ್ 3ರವರೆಗೂ ಡರ್ಬನ್ ನ ಕಿಂಗ್ಸ್ ಮಿಹದ್ ಕ್ರೀಡಾಂಗಣದಲ್ಲಿ ಆಯೋಜನೆಗೊಂಡಿದ್ದರೆ. ಸೆಪ್ಟೆಂಬರ್ 7 ರಂದು ಪ್ರಾರಂಭಗೊಂಡು 17ಕ್ಕೆ ಮುಕ್ತಾಯಗೊಳ್ಳಲಿರುವ 5 ಪಂದ್ಯಗಳ ಏಕದಿನ ಸರಣಿಯಲ್ಲಿ ಎರಡು ತಂಡಗಳು ಜಿದ್ದಾಜಿದ್ದಿನ ಪೈಪೋಟಿ ನಡೆಸಲಿವೆ.
ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ನಡುವೆ ನಡೆಯಲಿರುವ 3 ಪಂದ್ಯಗಳ ಟಿ20 ಸರಣಿಯು ಆಗಸ್ಟ್ 30 ರಿಂದ ಸೆಪ್ಟೆಂಬರ್ 3ರವರೆಗೂ ಡರ್ಬನ್ ನ ಕಿಂಗ್ಸ್ ಮಿಹದ್ ಕ್ರೀಡಾಂಗಣದಲ್ಲಿ ಆಯೋಜನೆಗೊಂಡಿದ್ದರೆ. ಸೆಪ್ಟೆಂಬರ್ 7 ರಂದು ಪ್ರಾರಂಭಗೊಂಡು 17ಕ್ಕೆ ಮುಕ್ತಾಯಗೊಳ್ಳಲಿರುವ 5 ಪಂದ್ಯಗಳ ಏಕದಿನ ಸರಣಿಯಲ್ಲಿ ಎರಡು ತಂಡಗಳು ಜಿದ್ದಾಜಿದ್ದಿನ ಪೈಪೋಟಿ ನಡೆಸಲಿವೆ.