ಲಕ್ನೋ:- ಯುಪಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟಗೊಂಡ ಹಿನ್ನೆಲೆ 7 ಮಂದಿ ದುರ್ಮರಣ ಹೊಂದಿದ ಘಟನೆ ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯಲ್ಲಿ ಜರುಗಿದೆ.
ಸ್ಫೋಟದ ತೀವ್ರತೆಗೆ 7 ಜನರ ದೇಹಗಳು ಛಿದ್ರಗೊಂಡಿವೆ. ಸ್ಫೋಟದ ಶಬ್ದ ಕಾರ್ಖಾನೆಯಿಂದ ಹಲವಾರು ಕಿಲೋಮೀಟರ್ ವರೆಗೂ ಕೇಳಿದೆ. ಸ್ಫೋಟದ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ 10 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿವೆ. ಅಲ್ಲದೇ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ
ಪಟಾಕಿ ಕಾರ್ಖನೆ ಶಾಹಿದ್ (35) ಎಂಬವರಿಗೆ ಸೇರಿದ್ದು, ಸ್ಫೋಟದಲ್ಲಿ ಅವರು ಸಾವನ್ನಪ್ಪಿದ್ದಾರೆ. ಅಲ್ಲದೇ ಕಾರ್ಮಿಕರಾದ ಶಿವನಾರಾಯಣ್, ಶಿವಕಾಂತ್, ಅಶೋಕ್ ಕುಮಾರ್ ಮತ್ತು ಜೈಚಂದ್ರ ಎಂಬವರು ಸಾವನ್ನಪ್ಪಿದ್ದಾರೆ. ಇನ್ನೆರೆಡು ಮೃತದೇಹಗಳ ಗುರುತು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಫೋಟ ಸಂಭವಿಸಿದಾಗ ಸುಮಾರು 18 ಜನ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಕಾರ್ಖಾನೆಯಲ್ಲಿ ಇರಿಸಲಾಗಿದ್ದ ರಾಸಾಯನಿಕಗಳಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಹಲವಾರು ಮೀಟರ್ ದೂರಕ್ಕೆ ಶವಗಳು ಹಾರಿ ಬಿದ್ದಿದ್ದವು ಎಂದು ಸ್ಥಳೀಯರು ಮಾಹಿತಿ ಹಂಚಿಕೊಂಡಿದ್ದಾರೆ.