ಬೆಂಗಳೂರು: ರಾಜಧಾನಿ ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೂ ಇನ್ನೂ ಮುಂದೆ ಬಿಎಂಟಿಸಿ ಬಸ್ಗಳು ತಮ್ಮ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಲಿವೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಸಚಿವ ಡಾ. ಕೆ ಸುಧಾಕರ್, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ಚಿಕ್ಕಬಳ್ಳಾಪುರಕ್ಕೆ ವಿಸ್ತರಿಸುವ ಜಿಲ್ಲೆಯ ಜನತೆಯ ಬಹುನಿರೀಕ್ಷಿತ ಬೇಡಿಕೆಯಂತೆ ಬಿಎಂಟಿಸಿ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಲಾಗಿದ್ದು, ಇನ್ನು ಮುಂದೆ ಬಿಎಂಟಿಸಿ ಬಸ್ಸುಗಳು ನಮ್ಮ ಚಿಕ್ಕಬಳ್ಳಾಪುರಕ್ಕೂ ಸಂಚರಿಸಲಿವೆ” ಎಂದು ಹೇಳಿದ್ದಾರೆ.
ರೈತರು, ವಿದ್ಯಾರ್ಥಿಗಳು,
ಸಣ್ಣ ವ್ಯಾಪಾರಸ್ಥರು, ಉದ್ಯೋಗಿಗಳು ಸೇರಿದಂತೆ ದಿನನಿತ್ಯ ಬೆಂಗಳೂರಿಗೆ ಓಡಾಡುವ ಚಿಕ್ಕಬಳ್ಳಾಪುರದ ಎಲ್ಲ ನಾಗರಿಕರಿಗೂ ಇದರಿಂದ ಅನುಕೂಲವಾಗಲಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಆರ್ಥಿಕ ಪ್ರಗತಿಗೂ ವೇಗ ದೊರೆಯಲಿದೆ” ಎಂದು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ. ಚಿಕ್ಕಬಳ್ಳಾಪುರದ ಜನತೆಯ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರಿಗೆ ಜಿಲ್ಲೆಯ ಜನತೆಯ ಪರವಾಗಿ ಕೃತಜ್ಞತೆಗಳು. ಈ ಬೇಡಿಕೆಯನ್ನು ಸಾಕಾರಗೊಳಿಸಲು ಶ್ರಮಿಸಿದ ಬಿಎಂಟಿಸಿ ಉಪಾಧ್ಯಕ್ಷರಾದ ನವೀನ್ ಕಿರಣ್ ಅವರಿಗೆ ಅಭಿನಂದನೆಗಳು” ಎಂದು ಧನ್ಯವಾದ ತಿಳಿಸಿದ್ದಾರೆ.