ಬೆಂಗಳೂರು:- ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸರ್ಕಾರ ನವೆಂಬರ್ 30ರ ವರೆಗೆ ಮತ್ತೊಮ್ಮೆ ಗಡುವು ನೀಡಿದೆ. ಈ ದಿನಾಂಕದ ಒಳಗೆ ಮಾಲೀಕರು ತಮ್ಮ ವಾಹನಗಳಿಗೆ ನಂಬರ್ ಪ್ಲೇಟ್ ಅಳವಡಿಕೆ ಮಾಡಬೇಕು. ಒಂದು ವೇಳೆ ಈ ದಿನಾಂಕದ ಒಳಗೆ ನಂಬರ್ ಪ್ಲೇಟ್ ಅಳವಡಿಕೆ ಮಾಡದಿದ್ದರೇ ಮುಂದಿನ ತಿಂಗಳು ಅಂದರೆ ಡಿಸೆಂಬರ್ 1 ರಿಂದ ದಂಡ ವಿಧಿಸಲಾಗುತ್ತದೆ.
1.90 ಕೋಟಿ ಹಳೆ ವಾಹನಗಳಲ್ಲಿ ಕೇವಲ 55 ಲಕ್ಷ ವಾಹನಗಳಿಗೆ ಮಾತ್ರ ಈ ನಂಬರ್ ಪ್ಲೇಟ್ ಅನ್ನು ಅಳವಡಿಸಲಾಗಿದೆ. ಇನ್ನುಳಿದವರು ಈ ನಂಬರ್ ಪ್ಲೇಟ್ ಅನ್ನು ಹಾಕಿಸಿಲ್ಲ. ಹೀಗಾಗಿ ಸರ್ಕಾರ ವಾಹನಗಳ ಮಾಲೀಕರಿಗೆ ಮತ್ತೊಂದು ಅವಕಾಶ ಕೊಟ್ಟಿದ್ದು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಇಲ್ಲದಿದ್ದರೇ ಸರ್ಕಾರಕ್ಕೆ ದಂಡ ಕಟ್ಟಬೇಕಾಗುತ್ತದೆ.
ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ವಾಹನಗಳಿಗೆ ಅಳವಡಿಸಿದರೆ, ಓನರ್ಶಿಪ್ ಬದಲಾವಣೆ, ನಕಲಿ ಆರ್ಸಿ, ನಕಲಿ ವಿಮೆ, ವಿಳಾಸ ಬದಲಾವಣೆ ಸೇರಿದಂತೆ ಇನ್ನಿತರ ಕೆಲಸ ಸುಲಭವಾಗಿ ಮಾಡಬಹುದು. ಇದರ ಜೊತೆಗೆ ಅಧಿಕೃತವಾಗಿಲ್ಲದ ವಾಹನಗಳು ರಸ್ತೆಯಲ್ಲಿ ಓಡಾಡುವುದನ್ನು ಸುಲಭವಾಗಿ ಪತ್ತೆ ಹಚ್ಚಲು ಈ ನಂಬರ್ ಪ್ಲೇಟ್ ಸಹಾಯಕ ಆಗುತ್ತದೆ.