ಬೆಂಗಳೂರು: ಉದ್ಯಾನವನಗಳ ಸಮಯವನ್ನು ಪರಿಷ್ಕರಣೆ ಮಾಡಲಾಗಿದೆ. ಪರಿಷ್ಕೃತ ವೇಳಾಪಟ್ಟಿ ಕುರಿತು ಬೆಂಗಳೂರಿನಲ್ಲಿ ಬಿಬಿಎಂಪಿ ಆದೇಶ ಹೊರಡಿಸಿದೆ. ಸಾರ್ವಜನಿಕರಿಗೆ ವಾಯುವಿವಾಹರಕ್ಕೆ ಹೆಚ್ಚಿನ ಅನುಕೂಲ ಮಾಡಿಕೊಡುವ ಸಲುವಾಗಿ ಬಿಬಿಎಂಪಿ ಈ ಕ್ರಮಕೈಗೊಳ್ಳಲಾಗಿದೆ.
ಪಾಲಿಕೆ ವ್ಯಾಪ್ತಿಯಲ್ಲಿ ಇಷ್ಟು ದಿನ ಬೆಳಗ್ಗೆ 5ರಿಂದ 10 ಮತ್ತು ಸಂಜೆ 4ರಿಂದ 8ರವರೆಗೆ ಉದ್ಯಾನಗಳು ತೆರೆದಿರುತ್ತಿದ್ದವು. ಆದರೆ ಇನ್ನು ಮುಂದೆ ಬೆಳಗ್ಗೆ 5ರಿಂದ 10 ಮತ್ತು ಮಧ್ಯಾಹ್ನ 1.30ರಿಂದ ರಾತ್ರಿ 8ರ ವರೆಗೆ ಉದ್ಯಾನಗಳನ್ನು ತೆರೆದಿರುವಂತೆ ಬಿಬಿಎಂಪಿ ಆದೇಶಿಸಿದೆ.
ಪಾರ್ಕ್ ನಿರ್ವಹಣೆ ಕುರಿತ ಕೆಲಸಗಳನ್ನು ಬೆಳಗ್ಗೆ 10ರಿಂದ ಮಧ್ಯಾಹ್ನ 1.30ರ ಒಳಗೆ ಮುಗಿಸಿಕೊಳ್ಳಲು ಸೂಚಿಸಿರುವ ಪಾಲಿಕೆ, ಈ ಅವಧಿಯಲ್ಲಿ ಸಾರ್ವಜನಿಕರಿಗೆ ಅವಕಾಶ ಇಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ.