ಬೆಂಗಳೂರು: ಯಾವುದೇ ಸುಳ್ಳು ಕೇಸ್ ಹಾಕಿದರೂ ನ್ಯಾಯಾಲಯದ ಮೇಲೆ ನಂಬಿಕೆ ಇದೆ, ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.
ಸುಪ್ರೀಂಕೋರ್ಟ್ (Supremecourt) ನಿಂದ ಡಿಕೆ ಶಿವಕುಮಾರ್ ಗೆ ರಿಲೀಫ್ ವಿಚಾರ ಮಾತನಾಡಿದ ಅವರು, ನನಗೆ ಅದರ ಬಗ್ಗೆ ಗೊತ್ತಿಲ್ಲ. ನನಗೆ ಯಾರೂ ಮಾಹಿತಿ ಕೊಟ್ಟಿಲ್ಲ ಎಂದರು
ಆದಾಯಕ್ಕೂ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ತನಿಖೆಗೆ ಮಧ್ಯಂತರ ತಡೆ ನೀಡಿದ್ದ ಹೈಕೋರ್ಟ್ (Highcourt) ಆದೇಶ ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ.
![Demo](https://prajatvkannada.com/wp-content/uploads/2023/08/new-Aston-Band.jpeg)