ಬೆಂಗಳೂರು:- ಸಾಮಾಜಿಕ ಜಾಲತಾಣಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹಿಂದೂ ವೋಟ್ ಬೇಡ, ಮುಸ್ಲಿಂ ವೋಟ್ ಸಾಕು ಎಂದು ಹೇಳಿಕೆ ನೀಡಿದ್ದಾರೆ ಎಂದು ಸುಳ್ಳು ಸುದ್ದಿ ಪತ್ರಿಕಾ ತುಣುಕು ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಏಳು ಜನರ ವಿರುದ್ಧ FIR ದಾಖಲಾಗಿದೆ.
ಈ ಸಂಬಂಧ ಕಾಂಗ್ರೆಸ್ ಕಾನೂನು ಘಟನೆ ಸೈಬರ್ ಕ್ರೈಂ ಠಾಣೆಗೆ ಕ ದೂರು ನೀಡಿತ್ತು. ಈ ದೂರಿನ ಮೇರೆಗೆ ಸದ್ಯ ಪ್ರಭಾಕರ್, ವಸಂತ ಗಿಳಿಯಾರ್ ಸೇರಿದಂತೆ ಒಟ್ಟು 7 ಜನರು ವಿರುದ್ದ ಎಫ್ಐಆರ್ ದಾಖಲಾಗಿದೆ.
ಇನ್ನೂ ಹಿಂದುಗಳ ಮತ ನಮಗೆ ಬೇಡ, ಮುಸ್ಲಿಮರ ವೋಟು ನಮಗೆ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸುದ್ದಿಯೊಂದು ಹರಿದಾಡುತ್ತಿದೆ. ಫ್ಯಾಕ್ಟ್ಚೆಕ್ ಮಾಡಿ ನೋಡಿದರೆ ಈ ರೀತಿಯಾಗಿ ಯಾವುದೇ ಸುದ್ದಿ ಪತ್ರಿಕೆಗಳಲ್ಲಿ ಪ್ರಕಟವಾಗಿಲ್ಲ. ಈ ರೀತಿಯಾಗಿ ನಕಲಿ ಸುದ್ದಿಯೊಂದನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ ಎಂದು ತಿಳಿದುಬಂದಿದೆ