ಮಲಯಾಳಂ ಚಿತ್ರರಂಗದ ಖ್ಯಾತ ನಟ ಬಾಲ ಅವರನ್ನು ಇಂದು ಬೆಳ್ಳಂಬೆಳಗ್ಗೆ ಪೊಲೀಸರು ಬಂಧಿಸಿದ್ದಾರೆ. ಬಾಲ ಅವರ ಮಾಜಿ ಪತ್ನಿ ನೀಡಿದ ದೂರಿನ ಮೇರೆಗೆ ಕಡವಂತರಾ ಪೊಲೀಸರು ಬಂಧಿಸಿದ್ದಾರೆ.
ಬಾಲ ಅವರ ಜೊತೆಗೆ ಅವರ ಮ್ಯಾನೇಜರ್ ರಾಜೇಶ್ ಮತ್ತು ಮತ್ತೊಬ್ಬ ಆರೋಪಿ ಅನಂತಕೃಷ್ಣನ್ ಅವರನ್ನೂ ಪೊಲೀಸರು ಬಂಧಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳ ಮೂಲಕ ನಿಂದನೆ ಮತ್ತು ಕಿರುಕುಳ ನೀಡಿದ ಆರೋಪ ಮೇಲೆ ಬಂಧಿಸಲಾಗಿದೆ.
ಬಾಲಾ ಅವರನ್ನು ಜಾಮೀನು ರಹಿತ ಸೆಕ್ಷನ್ ಅಡಿಯಲ್ಲಿ ಬಂಧಿಸಲಾಗಿದೆ. ಇಂದು ಬೆಳಗ್ಗೆ ಈ ಬಂಧನ ನಡೆದಿದೆ. ಕೆಲವು ತಿಂಗಳುಗಳಿಂದ ಬಾಲಾ ಮತ್ತು ಅವರ ಮಾಜಿ ಪತ್ನಿ ಅಮೃತಾ ಸುರೇಶ್ ನಡುವಿನ ಭಿನ್ನಾಭಿಪ್ರಾಯ ಉಂಟಾಗಿದೆ. ಅಮೃತಾ ತನ್ನ ಮದುವೆಯ ಸಂದರ್ಭದಲ್ಲಿ ಎದುರಿಸಿದ ಕೌಟುಂಬಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ್ದರು. ಏತನ್ಮಧ್ಯೆ, ಬಾಲಾ ಮತ್ತು ಅಮೃತಾರ ಮಾಜಿ ಡ್ರೈವರ್ ಗಂಭೀರ ಆರೋಪ ಮಾಡಿದ್ದಾರೆ. ನಟನ ಬಳಿ ನಾನು ಕೆಲಸ ಮಾಡುವಾಗ ತನ್ನ ಹೆಂಡತಿಯೊಂದಿಗೆ ಅನುಚಿತವಾಗಿ ವರ್ತಿಸುವುದನ್ನು ನೋಡಿದ್ದೇನೆ ಎಂದು ಆರೋಪಿಸಿದ್ದಾರೆ.