ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬಾಲಿವುಡ್ ನ ಹಿರಿಯ ನಟಿ ಸುಲೋಚನಾ ಲಾತ್ಕರ್ ಚಿಕಿತ್ಸೆ ಪಲಕಾರಿಯಾಗದೆ ನಿಧನರಾಗಿದ್ದಾರೆ. ಇಂದು ಸಂಜೆ 5.30ಕ್ಕೆ ದಾದರ್ ಸ್ಮಶಾನದಲ್ಲಿ ಸುಲೋಚನ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಮುಂಬೈನ ಶುಶ್ರೂಷಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಲೋಚನ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. 250ಕ್ಕೂ ಹೆಚ್ಚು ಹಿಂದಿ ಸಿನಿಮಾಗಳಲ್ಲಿ ನಟಿಸಿದ್ದ ಸುಲೋಚನಾ, ಮರಾಠಿ ಸಿನಿಮಾಗಳಲ್ಲೂ ಅಭಿನಯಿಸಿದ್ದಾರೆ. 1940ರಲ್ಲಿ ಮರಾಠಿ ಸಿನಿಮಾಗಳ ಮೂಲಕ ಚಿತ್ರೋದ್ಯಮಕ್ಕೆ ಕಾಲಿಟ್ಟ ಅವರು ನಂತರದ ದಿನಗಳಲ್ಲಿ ಹಿಂದಿ ಚಿತ್ರಗಳಲ್ಲೂ ನಟಿಸಿದರು. 50ಕ್ಕೂ ಹೆಚ್ಚು ಮರಾಠಿ ಚಿತ್ರಗಳಲ್ಲಿ ನಟಿಸಿ ಖ್ಯಾತಿ ಘಳಿಸಿದ್ದರು.
ಸಿನಿಮಾ ರಂಗಕ್ಕೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ 1999ರಲ್ಲಿ ಭಾರತ ಸರಕಾರವು ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮಹಾರಾಷ್ಟ್ರ ಸರಕಾರವು ಮಹಾರಾಷ್ಟ್ರ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಜೀವಮಾನ ಸಾಧನೆಗಾಗಿ ಫಿಲ್ಮ್ ಫೇರ್ ಪ್ರಶಸ್ತಿಯನ್ನು ಸುಲೋಚನ ಪಡೆದುಕೊಂಡಿದ್ದರು.