ಬಾಲಿವುಡ್ ಹಾಸ್ಯ ನಟ ಸುನಿಲ್ ಪಾಲ್ ಕಳೆದ 24 ಗಂಟೆಗಳಿಂದ ನಾಪತ್ತೆಯಾಗಿದ್ದು ಈ ಬ ಗ್ಗೆ ಮುಂಬೈನ ಸಂತಕ್ರುಜ್ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ದಾಖಲಾಗಿದೆ. ಕಳೆದ 24 ಗಂಟೆಯಿಂದ ಯಾರ ಸಂಪರ್ಕಕ್ಕೂ ಸಿಗದ ಹಿನ್ನೆಲೆಯಲ್ಲಿ ಕಂಗಲಾಗಿದ್ದ ಸುನಿಲ್ ಪಾಲ್ ಕುಟುಂಬಸ್ಥರು ಇದೀಗ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಸದ್ಯ ಸುನಿಲ್ ಪಾಲ್ ಅವರನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.
ಸುನಿಲ್ ಪಾಲ್ ಅವರು ಕಾರ್ಯಕ್ರಮ ನಿಮಿತ್ತ ಮುಂಬೈನಿಂದ ಹೊರ ಹೋಗೋದಾಗಿ ಪತ್ನಿಗೆ ಹೇಳಿ ಹೋಗಿದ್ದರು. ಬಳಿಕ ಕಾರ್ಯಕ್ರಮ ಮುಗಿದಿದ್ದು ವಾಪಸ್ ಮನೆಗೆ ಬರ್ತಿರೋದಾಗಿ ತಿಳಿಸಿದ್ದರು. ಆದರೆ ಅವರು ಮನೆಗೆ ಬಂದಿರುವುದಿಲ್ಲ. ಹೀಗಾಗಿ ಅವರ ಪತ್ನಿ ಫೋನ್ ಕರೆ ಮಾಡಲು ಪ್ರಯತ್ನ ಮಾಡಿದ್ದಾರೆ. ಸಂಪರ್ಕ ಸಾಧ್ಯವಾಗದ ಹಿನ್ನೆಲೆಯಲ್ಲಿ ಪೊಲೀಸರ ಬಳಿ ಸಹಾಯ ಕೇಳಿದ್ದಾರೆ. ಪ್ರಕರಣದ ಗಂಭೀರತೆ ಅರಿತ ಪೊಲೀಸರು, ತನಿಖೆ ಆರಂಭಿಸಿದ್ದಾರೆ. ಕೊನೆಗೂ ಪೊಲೀಸರು ಅವರನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಮಾಹಿತಿಗಳ ಪ್ರಕಾರ ಸುನಿಲ್ ಪಾಲ್ ಕಿಡ್ನಾಪ್ ಆಗಿದ್ದರು ಎಂದು ಹೇಳಲಾಗಿದೆ. ಆದರೆ ಯಾರು ಅವರನ್ನು ಕಿಡ್ನಾಪ್ ಮಾಡಿದ್ದರು ಅನ್ನೊದ್ರ ಬಗ್ಗೆ ಸದ್ಯಕ್ಕೆ ಯಾವುದೇ ಮಾಹಿತಿ ಇಲ್ಲ. .
ಸಿನಿಲ್ ಪಲ್ ‘The Great Indian Laughter Challenge-2005’ ಶೋಗೆಲ್ಲುವ ಮೂಲಕ ಹೆಚ್ಚು ಜನಪ್ರಿಯತೆ ಪಡೆದುಕೊಂಡಿದ್ದಾರೆ. ಅಲ್ಲದೇ ಬಾಲಿವುಡ್ ಸಿನಿಮಾಗಳಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದಾರೆ. 2004ರಲ್ಲಿ ತೆರೆಕಂಡ ಹಮ್ ತುಮ್, 2006ರಲ್ಲಿ ಬಿಡುಗಡೆಯಾದ ಫಿರ್ ಹೇರಾ ಫೇರಿ ಸಿನಿಮಾಗಳಲ್ಲಿ ನಟಿಸಿದ್ದಾರೆ. ಸದ್ಯ ಸುನಿಲ್ ಸುರಕ್ಷಿತವಾಗಿ ಮನೆಗೆ ಹಿಂದಿರುಗಿದ್ದರಿಂದ ಕುಟುಂಬಸ್ಥರು ನೆಮ್ಮದಿಯಾಗಿದ್ದಾರೆ.