ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಕರೆತರಲಾಗಿದೆ. ಬೆಳಗಿನಜಾವ ೪.೩೦ ಗಂಟೆಗೆ ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಹೊರಟು ಬೆಳಗ್ಗೆ ೯.೪೫ರ ಸುಮಾರಿಗೆ ಬಳ್ಳಾರಿ ಸೆಂಟ್ರಲ್ ಜೈಲು ತಲುಪಿದರು. ಬೆಂಗಳೂರಿನ ಪೊಲೀಸರ ಭದ್ರತೆಯೊಂದಿಗೆ ಟಿಟಿ ವಾಹನದಲ್ಲಿ ದರ್ಶನ್ ನ್ನು ಕರೆ ತರಲಾಯಿತು.
ಪೂಮಾ ಕಂಪನಿಯ ಬ್ಲಾಕ್ ಟಿಶಟ್೯, ಜೀನ್ಸ್ ಧರಿಸಿದ್ದ ದರ್ಶನ್ ಬಲಗೈಯಲ್ಲಿ ಬ್ಯಾಂಡೇಜ್ ಕಟ್ಟಿಕೊಂಡಿದ್ದರು. ಟಿಟಿ ವಾಹನದಿಂದ ಇಳಿದ ದರ್ಶನ್ ಜೈಲು ಪ್ರವೇಶ ದ್ವಾರದ ಎಂಟ್ರಿ ಪುಸ್ತಕದಲ್ಲಿ ಸಹಿ ಮಾಡಿದ ಬಳಿಕ ಜೈಲು ವೈದ್ಯಾಧಿಕಾರಿಗಳು ಆರೋಗ್ಯ ತಪಾಸ ನಡೆಸಿದ ಬಳಿಕ ಹೈ ಸೆಕ್ಯೂರಿಟಿ ಸೆಲ್ ಗೆ ಕಳುಹಿಸಲಾಯಿತು.
ಡಿಸಿ ಭೇಟಿ: ಆಂಧ್ರದ ಅನಂತಪು ಜಿಲ್ಲೆಯ ಮೂಲಕ ಬಳ್ಳಾರಿ ಗಡಿಗ್ರಾಮ ಜೋಳದ ರಾಶಿ ಮೂಲಕ ಆಗಮಿಸಿದ ದರ್ಶನ್ ವಾಹನದ ಮುಂದೆ ಸ್ಥಳೀಯ ಪೊಲೀಸರು ಕೂಡ ಬಿಗಿ ಭದ್ರತೆ ಒದಗಿಸಿದ್ದರು. ಜಿಲ್ಲಾಧಿಕಾರಿ ಪ್ರಶಾಂತಕುಮಾರ್ ಮಿಶ್ರಾ, ಎಸ್ಪಿ ಶೋಭರಾಣಿ, ಜೈಲು ಅಧೀಕ್ಷಕಿ ಲತಾ ನೇತೃತ್ವದಲ್ಲಿ ಪೊಲೀಸರು ಜೈಲಿನೊಳಗಿನ ಎಲ್ಲಪ ಪರಿಸ್ಥಿತಿ ವೀಕ್ಷಿಸಿದರು.
ಅಭಿಮಾನಿಗಳಿಗೆ ತಡೆ: ಬಳ್ಳಾರಿ ಜೈಲಿಗೆ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಿ ಹೆಚ್ಚಿನ ಭದ್ರತೆ. ದರ್ಶನ್ ಅಭಿಮಾನಿಗಳನ್ನು ಜೈಲು ಬಳಿಗೆ ಬಿಡದಂತೆ ದುರ್ಗಮ್ಮಗುಡಿ ಬಳಿಯೇ ಬ್ಯಾರಿಕೇಡ್ ಅಳವಡಿಸಿ, ತಡೆಹಿಡಿಯಲಾಯಿತು. ದರ್ಶನ್ ಬರುತ್ತಿದ್ದಂತೆ ದುರ್ಗಮ್ಮ ಗುಡಿ ಬಳಿ ಜಮಾಯಿಸಿದ್ದ ಅಭಿಮಾನಿಗಳು ಕೇಕೆ ಹಾಕಿದರು.