ತಿರುವನಂತಪುರಂ: ಸುಪ್ರೀಂ ಕೋರ್ಟ್ ಮಾಜಿ ಜಡ್ಜ್ ಫಾತೀಮಾ ಬೀವಿ ಗುರುವಾರ ನಿಧನರಾದರು. ಅವರಿಗೆ 96 ವರ್ಷ ವಯಸ್ಸಾಗಿತ್ತು ಎಂದು ಏಷ್ಯಾನೆಟ್ ನ್ಯೂಸ್ ಮಲಯಾಳಂ ವರದಿ ಮಾಡಿದೆ. ಫಾತಿಮಾ ಬೀವಿ ಅವರು ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶರಾಗಿದ್ದರು. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮಾಜಿ ಸದಸ್ಯೆಯೂ ಆಗಿದ್ದ ಫಾತಿಮಾ ಬೀವಿ, ಅವರು 1997-2001ರವರೆಗೆ ತಮಿಳುನಾಡಿನ ರಾಜ್ಯಪಾಲರಾಗಿದ್ದರು.
ದೇಶದ ಉನ್ನತ ನ್ಯಾಯಾಂಗಕ್ಕೆ ನೇಮಕಗೊಂಡ ಮೊದಲ ಮುಸ್ಲಿಂ ಮಹಿಳೆಯೂ ಆಗಿದ್ದರು. 1927 ರಲ್ಲಿ ಕೇರಳದಲ್ಲಿ ಜನಿಸಿದ್ದ ಫಾತೀಮಾ ಬೀವಿಗೆ ಅವರ ತಂದೆ ಕಾನೂನು ವಿದ್ಯಾಭ್ಯಾಸ ಮಾಡಲು ಪ್ರೋತ್ಸಾಹ ನೀಡಿದ್ದರು. 1950 ರಲ್ಲಿ, ಬಾರ್ ಕೌನ್ಸಿಲ್ ಪರೀಕ್ಷೆಯಲ್ಲಿ ಅಗ್ರಸ್ಥಾನ ಪಡೆದ ಇವರು, ಬಾರ್ ಕೌನ್ಸಿಲ್ ಚಿನ್ನದ ಪದಕವನ್ನು ಪಡೆದ ಮೊದಲ ಮಹಿಳೆ ಎನಿಸಿಕೊಂಡಿದ್ದರು.