ನವದೆಹಲಿ: ಕುಸ್ತಿ ಫೆಡರೇಶನ್ (WFI) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ವಿರುದ್ಧದ ಹೋರಾಟವನ್ನು ರಸ್ತೆಯಲ್ಲಲ್ಲ, ನ್ಯಾಯಾಲಯದಲ್ಲಿ ನಡೆಸಲಾಗುತ್ತದೆ ಎಂದು ಕುಸ್ತಿಪಟುಗಳು (Wrestlers) ಎಚ್ಚರಿಕೆ ನೀಡಿದ್ದಾರೆ. ಸಿಂಗ್ ವಿರುದ್ಧ ಚಾರ್ಜ್ಶೀಟ್ ಸಲ್ಲಿಸುವ ಭರವಸೆಯನ್ನು ಸರ್ಕಾರ ಈಡೇರಿಸಿದೆ.
ಅಲ್ಲದೇ ನಮಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಯುತ್ತದೆ. ಅದು ರಸ್ತೆಯ ಮೇಲಲ್ಲ, ನ್ಯಾಯಾಲಯದಲ್ಲಿ ಎಂದು ಟ್ವಿಟ್ಟರ್ನಲ್ಲಿ ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಪ್ರಕಟಿಸಿದ್ದಾರೆ. ಡಬ್ಲ್ಯುಎಫ್ಐನ ಚುನಾವಣಾ ಪ್ರಕ್ರಿಯೆಯು ಪ್ರಾರಂಭವಾಗಿದೆ. ಜುಲೈ 11 ರ ಚುನಾವಣೆಗೆ ಸರ್ಕಾರ ನೀಡಿರುವ ಭರವಸೆಗಾಗಿ ಕಾಯುತ್ತೇವೆ. ಅಲ್ಲದೇ ಕೆಲವು ದಿನಗಳ ಕಾಲ ಸಾಮಾಜಿಕ ಜಾಲತಾಣಗಳಿಂದ ವಿರಾಮ ತೆಗೆದುಕೊಳ್ಳುತ್ತಿರುವುದಾಗಿ ಟ್ವೀಟ್ ಮಾಡಿದ್ದಾರೆ.