ವಿವಾದಾತ್ಮಕ ಜಮೀನಿನ ವಿಚಾರಕ್ಕೆ ಎರಡು ಕುಟುಂಬಗಳ ಮಧ್ಯೆ ಮಾರಾಮಾರಿ ನಡೆದಿದೆ. ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದ ಜಮೀನಿನಲ್ಲೇ ಎರಡು ಗುಂಪುಗಳು ಕುಡುಗೋಲು, ದೊಣ್ಣೆ ಹಿಡಿದು ಹೊಡೆದಾಡಿಕೊಂಡಿದ್ದಾರೆ.
ಬಡಿದಾಟದ ದೃಶ್ಯ ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿದೆ. ಘಟನೆಯಲ್ಲಿ 7 ಜನರಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾಕತಿ ನಿವಾಸಿ ಅನಿಲ್ ಮುಂಗಾರಿ ಸೇರಿ 7 ಜನರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.
ಎಂಬಾತ ಗುಂಡಾಗಳನ್ನು ಕರೆಯಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಅನಿಲ್ ಮುಂಗಾರಿಗೆ ಸೇರಿದ ಜಮೀನು ಲಪಟಾಯಿಸಲು ಸಿದ್ದರಾಯಿ ತುಂಬರಿ ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗಿದೆ.
ಕೋರ್ಟ್ ವಿಚಾರಣೆಯಲ್ಲಿರುವ ಜಮೀನು ಬಿಟ್ಟುಕೊಡುವಂತೆ ಸಿದ್ದರಾಯಿ ತುಂಬರಿ ಬೇಡಿಕೆ ಇಟ್ಟಿದ್ದು, ಇದಕ್ಕೆ ಒಪ್ಪದಾಗ ಅನಿಲ್ ಮುಂಗಾರಿ ಕುಟುಂಬಸ್ಥರ ಮೇಲೆ ಗುಂಡಾಗಳನ್ನು ಕರೆಯಿಸಿ ಹಲ್ಲೆ ನಡೆಸಿದ್ದಾನೆ. ಸದ್ಯ ಬೆಳಗಾವಿಯ ಕಾಕತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ತನಿಖೆಯನ್ನು ನಡೆಸಲಾಗುತ್ತಿದೆ