‘ಘಟಶ್ರಾದ್ಧ’ ಹಾಗೂ ಗುಡ್ಡದ ಭೂತ ಸೇರಿದಂತೆ ಹಲವು ಜನಪ್ರಿಯ ಧಾರವಾಹಿ ಹಾಗೂ ಸಿನಿಮಾಗಳನ್ನು ನಿರ್ಮಿಸಿದ್ದ ಕನ್ನಡದ ಹೆಸರಾಂತ ನಿರ್ಮಾಪಕ ಸದಾನಂದ ಸುವರ್ಣ (93) ನಿಧನರಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿಯವರಾದ ಅವರು 1931, ಡಿಸೆಂಬರ್ 24 ರಂದು ಜನಿಸಿದ ಅವರು ನಿರ್ಮಿಸಿದ ಮೊದಲ ಸಿನಿಮಾ ಘಟಶ್ರಾದ್ಧ. ಗಿರೀಶ್ ಕಾಸರವಳ್ಳಿ ನಿರ್ದೇಶನದ ಮೊದಲ ಸಿನಿಮಾವಿದು. ಬಳಿಕ ಗಿರೀಶ್ ಕಾಸರವಳ್ಳಿ ನಿರ್ದೇಶಿಸಿದ ಮನೆ, ಕುಬಿ ಮತ್ತು ಇಯಾಲ, ತಬರನ ಕಥೆ ಸಿನಿಮಾಗಳ ಕಾರ್ಯನಿರ್ವಾಹಕ ನಿರ್ಮಾಪಕರಾಗಿದ್ದರು. ದೂರದರ್ಶನಕ್ಕೆ ಗುಡ್ಡದ ಭೂತ ಧಾರಾವಾಹಿ ನಿರ್ಮಿಸಿ, ನಿರ್ದೇಶಿಸಿದ್ದರು. ಇದು ಪ್ರಕಾಶ್ ರೈ ಅವರಿಗೆ ಜನಪ್ರಿಯತೆ ತಂದು ಕೊಟ್ಟಿತು. ದೂರದರ್ಶನಕ್ಕೆ ಅವರ ನಿರ್ದೇಶನದ, ಶಿವರಾಮ ಕಾರಂತ ಅವರ ಸಂದರ್ಶನದ ‘ಹುಚ್ಚು ಮನಸ್ಸಿನ ಹತ್ತು ಮುಖಗಳು’ ಹತ್ತು ಕಂತುಗಳಲ್ಲಿ ಪ್ರಸಾರವಾಗಿತ್ತು.
ಅವರ ನಿರ್ದೇಶನದ ‘ಕೋರ್ಟ್ ಮಾರ್ಷಲ್’ ನಾಟಕವೂ ರಂಗಾಸಕ್ತರ ಮೆಚ್ಚುಗೆಗೆ ಪಾತ್ರವಾಗಿತ್ತು. ಮುಂಬೈನಲ್ಲಿ ರಾತ್ರಿ ಶಾಲೆಯಲ್ಲಿ ಕಲಿತು, ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದರು. ರಂಗಭೂಮಿಯಲ್ಲಿಯೂ ಸಹ ಸದಾನಂದ ಸುವರ್ಣ ಸಕ್ರಿಯರಾಗಿದ್ದರು, ಇದರ ಜೊತೆಗೆ ‘ಉರುಳು’, ‘ಧರ್ಮಚಕ್ರ’, ‘ಸುಳಿ’, ‘ಡೊಂಕುಬಾಲ’ ಇನ್ನೂ ಕೆಲವು ನಾಟಕಗಳನ್ನು ಸದಾನಂದ ಸುವರ್ಣ ನಿರ್ದೇಶಿಸಿದ್ದರು. ಸದಾನಂದ ಸುವರ್ಣ ನಿರ್ಮಾಣ ಮಾಡಿದ್ದ ‘ಘಟಶ್ರಾದ್ಧ’ ಸಿನಿಮಾಕ್ಕೆ ಕೇಂದ್ರ ಸರ್ಕಾರವು ಸುವರ್ಣ ಕಮಲ ನೀಡಿತ್ತು.
ರಂಗಭೂಮಿಯಲ್ಲಿಯೂ ಸಹ ಸದಾನಂದ ಸುವರ್ಣ ಸಕ್ರಿಯರಾಗಿದ್ದರು, ಅವರ ನಿರ್ದೇಶನದ ‘ಕೋರ್ಟ್ ಮಾರ್ಷಲ್’ ನಾಟಕ ಬಹಳ ಜನಪ್ರಿಯತೆ ಗಳಿಸಿತ್ತು. ಇದರ ಜೊತೆಗೆ ‘ಉರುಳು’, ‘ಧರ್ಮಚಕ್ರ’, ‘ಸುಳಿ’, ‘ಡೊಂಕುಬಾಲ’ ಇನ್ನೂ ಕೆಲವು ನಾಟಕಗಳನ್ನು ಸದಾನಂದ ಸುವರ್ಣ ನಿರ್ದೇಶಿಸಿದ್ದರು. ಸದಾನಂದ ಸುವರ್ಣ ನಿರ್ಮಾಣ ಮಾಡಿದ್ದ ‘ಘಟಶ್ರಾದ್ಧ’ ಸಿನಿಮಾಕ್ಕೆ ಕೇಂದ್ರ ಸರ್ಕಾರವು ಸುವರ್ಣ ಕಮಲ ನೀಡಿತ್ತು. ಇನ್ನು ಗಿರೀಶ್ ಕಾಸರವಳ್ಳಿ ನಿರ್ದೇಶನ ಮಾಡಿ, ಬಾಲಿವುಡ್ನ ಖ್ಯಾತ ನಟ ನಸಿರುದ್ಧೀನ್ ಶಾ ನಟಿಸಿದ್ದ ‘ಮನೆ’ ಹಾಗೂ ಕಾಸರವಳ್ಳಿ ಅವರೇ ನಿರ್ದೇಶನ ಮಾಡಿ ಚಾರುಹಾಸನ್ ನಟಿಸಿದ್ದ ‘ತಬರನ ಕತೆ’ ಸಿನಿಮಾಕ್ಕೆ ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ ಮಾಡಿದ್ದರು. ಮಾತ್ರವಲ್ಲದೆ ‘ಕುಬಿ ಮತ್ತು ಇಯಾಲ’ ಸಿನಿಮಾ ನಿರ್ದೇಶನ ಮಾಡಿದ್ದರು. ಇದು ಪೂರ್ಣಚಂದ್ರ ತೇಜಸ್ವಿ ಅವರ ಕತೆ ಆಧರಿತ ಸಿನಿಮಾ. ಆ ಸಿನಿಮಾದಲ್ಲಿ ಬಾಲಿವುಡ್ ನ ಖ್ಯಾತ ನಟ ಚಾರುಹಾಸನ್ ನಟಿಸಿದ್ದರು.
ಮುಂಬೈನಲ್ಲಿ ಬಹು ಕಷ್ಟದಲ್ಲಿ ವಿದ್ಯಾಭ್ಯಾಸ ಮಾಡಿದ್ದ ಸದಾನಂದ ಸುವರ್ಣ ಅವರು ಸುಮಾರು ಹತ್ತು ವರ್ಷಗಳ ಕಾಲ ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗ ಮಾಡಿದ್ದರು. ಅದಾದ ಬಳಿಕ ಸಾಹಿತ್ಯ, ರಂಗಭೂಮಿ, ಸಿನಿಮಾಗಳಲ್ಲಿ ಆಸಕ್ತಿ ಬೆಳೆಸಿಕೊಂಡು ಬೆಂಗಳೂರಿಗೆ ವಾಪಸ್ಸಾಗಿ ಇಲ್ಲಿ ಸಕ್ರಿಯವಾಗಿದ್ದರು. ಕಳೆದ ಸುಮಾರು ಹತ್ತು ವರ್ಷದಿಂದ ಅವರು ಮಂಗಳೂರಿನಲ್ಲಿಯೇ ನೆಲೆಸಿದ್ದ ಅವರು ವಯೋಸಹ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಸದಾನಂದ ಸುವರ್ಣ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಹಿರಿಯ ರಂಗಕರ್ಮಿ, ಚಲನಚಿತ್ರ ನಿರ್ದೇಶಕ- ನಿರ್ಮಾಪಕ ಸದಾನಂದ ಸುವರ್ಣರ ನಿಧನದ ಸುದ್ದಿ ಕೇಳಿ ದು:ಖವಾಯಿತು. ಸದಾನಂದ ಸುವರ್ಣರು ನಿರ್ಮಿಸಿದ್ದ ‘‘ಘಟಶ್ರಾದ್ಧ’’ ಚಿತ್ರ ಮತ್ತು ನಿರ್ದೇಶಿಸಿದ್ದ ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರ ‘’ಕುಬಿ ಮತ್ತು ಇಯಾಳ’’ ಕತೆಯನ್ನಾಧರಿಸಿದ ಚಿತ್ರಗಳೆರಡೂ ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿಗಳಿಗೆ ಭಾಜನವಾಗಿವೆ ಎಂದು ಬರೆದುಕೊಂಡಿದ್ದಾರೆ.