ಬೆಂಗಳೂರು:- ನಿನ್ನೆ ಗಣರಾಜ್ಯೋತ್ಸವ ಆಚರಣೆ ವೇಳೆ ನಗರದ ಮಾನಿಕ್ ಷಾ ಪರೇಡ್ ಮೈದಾನದಲ್ಲಿ ಭದ್ರತೆ ಭೇದಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರತ್ತ ನುಗ್ಗಲು ಯತ್ನಿಸಿದ ವ್ಯಕ್ತಿ ವಿರುದ್ಧ ಕಬ್ಬನ್ ಪಾರ್ಕ್ ಠಾಣಾ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಸಾರ್ವಜನಿಕರಲ್ಲಿ ಆತಂಕ ಉಂಟುಮಾಡುವುದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಪರಶುರಾಮ್ 1993ರಲ್ಲಿ ಕೆಪಿಎಸ್ಸಿ ಪರೀಕ್ಷೆ ಬರೆದಿದ್ದರು. ಆದರೆ, ಪರೀಕ್ಷೆ ಫಲಿತಾಂಶವನ್ನು ಸರ್ಕಾರ ತಡೆಹಿಸಿದಿದೆ. ಇದರಿಂದ ಬೇಸತ್ತು ಮನವಿ ಕೊಡಲು ಪ್ರೆಸ್ ಪಾಸ್ ಹಿಡಿದು ಸಿದ್ದರಾಮಯ್ಯರತ್ತ ನುಗ್ಗಲು ಯತ್ನಿಸಿದ್ದರು. ಮೊದಲು ಸಿದ್ದರಾಮಯ್ಯ ಅವರ ಗಮನ ಸೆಳೆಯಲು ಪತ್ರ ಪ್ರದರ್ಶಿಸಿದ್ದರು. ಸಿದ್ದರಾಮಯ್ಯ ಅವರು ಗಮನಿಸಿದಿದ್ದಾಗ ಮೈದಾನಕ್ಕೆ ನುಗ್ಗಲು ಪ್ರಯತ್ನಿಸಿದ್ದರು. ಕೂಡಲೇ ಎಚ್ಚೆತ್ತ ಪೊಲೀಸರು, ಪರುಶರಾಮನನ್ನು ವಶಕ್ಕೆ ಪಡೆದಿದ್ದರು ಎನ್ನಲಾಗಿದೆ.