ಗಿಚ್ಚಿ ಗಿಲಿ ಗಿಲಿ ಮೂರನೇ ಶೋ ವಿನ್ನರ್ ಹಾಸ್ಯ ನಟ ಹುಲಿ ಕಾರ್ತಿಕ್ ಸಖತ್ ಬ್ಯುಸಿಯಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಮಧ್ಯೆ ಹುಲಿ ಕಾರ್ತಿಕ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಬೋವಿ ಸಮುದಾಯವನ್ನ ಹೀಗಳೆಯುವ ರೀತಿಯಲ್ಲಿ ಹುಲಿ ಕಾರ್ತಿಕ್ ಮಾತನಾಡಿದ್ದರು. ಬೋವಿ ಸಮುದಾಯದ ಹೆಸರನ್ನು ನೆಗೆಟಿವ್ ಆಗಿ ಬಳಸಿದ್ದರು. ಈ ಕಾರಣದಿಂದಲೇ ಹುಲಿ ಕಾರ್ತಿಕ್ ವಿರುದ್ಧ ದೂರು ದಾಖಲಾಗಿದೆ ಎಂದು ಹೇಳಲಾಗಿದೆ.
ಕಲರ್ಸ್ ಕನ್ನಡ ವಾಹಿನಿಯ ‘ಅನುಬಂಧ ಅವಾರ್ಡ್’ ಕಾರ್ಯಕ್ರಮದಲ್ಲಿ ಬಳಕೆ ಮಾಡಿದ ಪದವು ಬೋವಿ ಜನಾಂಗಕ್ಕೆ ನೋವುಂಟು ಮಾಡಿದೆ. ಹೀಗಾಗಿ ಜಾತಿ ನಿಂದಿಸಿ ಮಾತನಾಡಿದ ನಟನ ಮೇಲೆ ಕ್ರಮ ಕೈಗೊಳ್ಳಲು ದೂರು ನೀಡಲಾಗಿದೆ. ಹುಲಿ ಕಾರ್ತಿಕ್ ಅಲ್ಲದೆ ‘ಅನುಬಂಧ’ ಅವಾರ್ಡ್ಸ್ನ ಸಂಭಾಷಣೆಕಾರ, ಕಾರ್ಯಕ್ರಮದ ನಿರ್ಮಾಪಕ, ನಿರ್ದೇಶಕರ ಮೇಲೂ ಕೇಸ್ ದಾಖಲಾಗಿದೆ.
ಜಾತಿ ನಿಂದನೆ ಪ್ರಕರಣದಲ್ಲಿ ಆರೋಪಿಯಾಗಿ A-1 ಹುಲಿ ಕಾರ್ತಿಕ್, A-2 ಅನುಬಂಧ ಸ್ಕ್ರಿಪ್ಟ್ ರೈಟರ್, A-3 ಅನುಬಂಧ ಡೈರೆಕ್ಟರ್, A-4 ನಿರ್ಮಾಪಕನ ವಿರುದ್ದ ದೂರು ದಾಖಲಾಗಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.