ಬೆಂಗಳೂರು : ಕರ್ನಾಟಕ ವಿಧಾನ ಸಭೆ ಚುನಾವಣೆ ಕಾವು ಜೋರಾಗಿದೆ. ಚುನಾವಣಾ ಪ್ರಚಾರದ ನಡುವೆ ಹೆಬ್ಬಾಳ ಅಭ್ಯರ್ಥಿಯ ವಿರುದ್ದ FIR ದಾಖಲಾಗಿದೆ. ಹೆಬ್ಬಾಳ ಬಿಜೆಪಿ ಅಭ್ಯರ್ಥಿ ಕಟ್ಟಾ ಜಗದೀಶ್ ನಾಯ್ಡು (Katta Jagadish Naidu) ವಿರುದ್ದ FIR ದಾಖಲಾಗಿದೆ. ಮಹಿಳೆಯೊಬ್ಬರಿಗೆ ಬಿಜೆಪಿ ಸೇರಿ, ಬಿಜೆಪಿ ಪರವಾಗಿ ಪ್ರಚಾರ ಮಾಡುವಂತೆ ಒತ್ತಾಯಿಸಲಾಗಿದೆ. ಒಂದು ವೇಳೆ ಬಿಜೆಪಿ ಪರವಾಗಿ ಪ್ರಚಾರ ಮಾಡದಿದ್ರೆ ಕೊಲ್ಲುವ ಬೇದರಿಕೆ ಹಾಕಿದ್ದಾರೆಂದು ಆರೋಪಿಸಿ ದೂರು ದಾಖಲಾಗಿದೆ. ಈ ಸಂಬಂಧ ದೂರು ಹೆಚ್ಎಂಟಿ ಲೇಔಟ್ ನಿವಾಸಿ ರಾಣಿ ವೆಂಕಟರಮಣ ಎಂಬ ಮಹಿಳೆ ಹೆಬ್ಬಾಳ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮನೆಗೆ ನುಗ್ಗಿ ಬಿಜೆಪಿ ಪರ ಪ್ರಚಾರ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಬಿಜೆಪಿ ಪರ ಪ್ರಚಾರ ಮಾಡದಿದ್ರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ಪುತ್ರ ಕಟ್ಟಾ ಜಗದೀಶ್ ನಾಯ್ಡು, ಅಭಯರಾಜು ಹಾಗೂ ಪುನೀತ್ ಎಂಬುವವರ ಮೇಲೆ ದೂರು ದಾಖಲು ಮಾಡಲಾಗಿದ್ದು, ಎಫ್ಐಆರ್ ಆಗಿದೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಮೇ 10 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.