ಬೆಂಗಳೂರು:- ಬಿಗ್ ಬಾಸ್ ಮಾಜಿ ಸ್ಪರ್ಧಿ `ಪ್ರಶಾಂತ್ ಸಂಬರ್ಗಿ’ ವಿರುದ್ಧ `FIR’ ದಾಖಲಾಗಿದೆ. ಸುಳ್ಳು ದೂರು ಸಲ್ಲಿಸಿ ವಂಚನೆ ಎಸಗಿದ ಆರೋಪದ ಹಿನ್ನೆಲೆ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರ ದಾಖಲಾಗಿದೆ.
ಪ್ರಶಾಂತ್ ಸಂಬರ್ಗಿ ವಿರುದ್ಧ ಉದ್ಯಮಿ ದೇವನಾತ್ ವೈಕ್ಯೆ ಅವರು ದೂರು ನೀಡಿದವರು. ಈ ದೂರನ್ನು ಆಧರಿಸಿ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಿಕೊಳ್ಳಲಾಗಿದೆ. 2017ರ ಜುಲೈನಲ್ಲಿ ದೇವನಾತ್ ಅವರು ಸಂಬರಗಿಯಿಂದ ಸಾಲ ಪಡೆದಿದ್ದರು. ಮನೆಯ ಅಸಲಿ ದಾಖಲೆ, ಖಾಲಿ ಚೆಕ್ ಕೊಟ್ಟು ಶ್ಯೂರಿಟಿ ನೀಡಿದ್ದರು. ಬಳಿಕ 2017ರ ಡಿಸೆಂಬರ್ನಲ್ಲಿ ಪ್ರಶಾಂತ್ಗೆ ದೇವನಾಥ್ ಹಣ ವಾಪಸ್ ನೀಡಿದ್ದರು.
ಆದರೆ ದೇವನಾಥ್ ಬಳಿ ಹೆಚ್ಚಿನ ಬಡ್ಡಿ, ಹಣ ನೀಡಬೇಕೆಂದು ಮನೆ ದಾಖಲೆ ನೀಡದೆ ಪ್ರಶಾಂತ್ ಸಂಬರ್ಗಿ ಸತಾಯಿಸಿದ್ದರು. ಜೊತೆಗೆ ವಿವಿಧ ಠಾಣೆಯಲ್ಲಿ ದೇವನಾತ್ ವಿರುದ್ಧ ಸುಳ್ಳು ದೂರು ನೀಡಿದ್ದರು. ಸುಳ್ಳು ದೂರು ಹಿನ್ನೆಲೆಯಲ್ಲಿ ಪ್ರಶಾಂತ್ ಸಂಬರಗಿ ವಿರುದ್ಧ ಎಫ್ ಐಆರ್ ದಾಖಲಾಗಿದೆ. ದೂರಿನ ಅನ್ವಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.