ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ (Congress) ಸರ್ಕಾರ ರಚನೆಯಾದ ನಂತರ ಸೋಮವಾರದಿಂದ (ಮೇ 22) ಮೊದಲ ವಿಧಾನಸಭೆ ಅಧಿವೇಶನ (Karnataka Assembly Session) ನಡೆಯಲಿದೆ. ಒಟ್ಟು ಮೂರು ದಿನಗಳ ಕಾಲ ಅಧಿವೇಶನ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಮೊದಲ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಂಗಾಮಿ ಸ್ಪೀಕರ್ ನೇತೃತ್ವದಲ್ಲಿ ಅಧಿವೇಶನ ನಡೆಯಲಿದೆ ಎಂದರು.
ಮೇ 22ರಂದು ನಡೆಯುವ ಅಧಿವೇಶನದ ಹಂಗಾಮಿ ಸಭಾಪತಿಯಾಗಿ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ವಿಧಾನಸಭಾ ಕ್ಷೇತ್ರದ ಶಾಸಕ ಆರ್.ವಿ.ದೇಶಪಾಂಡೆ ಇರಲಿದ್ದಾರೆ. ಎಲ್ಲಾ ಶಾಸಕರ ಪ್ರಮಾಣವಚನ ಸ್ವೀಕಾರದ ನಂತರ ಸಭಾಪತಿ ಆಯ್ಕೆ ನಡೆಯಲಿದೆ ಎಂದು ಸಿದ್ದರಾಮಯ್ಯ ಹೇಳಿದರು.