ದೆಹಲಿ :ಕರ್ನಾಟಕವಿಧಾನಸಭೆಚುನಾವಣೆಹಿನ್ನೆಲೆಯಲ್ಲಿಬಿಜೆಪಿಅಭ್ಯರ್ಥಿಗಳಆಯ್ಕೆಗಾಗಿದೆಹಲಿಗೆಹೋಗಿರುವಸಿಎಂಬೊಮ್ಮಾಯಿ, ಇದೀಗಸೋಮವಾರಬಿಜೆಪಿಅಭ್ಯರ್ಥಿಗಳಮೊದಲಪಟ್ಟಿಬಿಡುಗಡೆಮಾಡುವುದಾಗಿಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಬಿಜೆಪಿ ಸಂಸದೀಯ ಮಂಡಳಿಯ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸುದೀರ್ಘ ಚರ್ಚೆ ನಡೆದಿದ್ದು, ಸೋಮವಾರ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸುದೀರ್ಘ ಚರ್ಚೆ ನಡೆಸಲಾಗಿದೆ. ಸಭೆಯಲ್ಲಿ 224 ಕ್ಷೇತ್ರಗಳ ಬಗ್ಗೆಯೂ ಚರ್ಚೆ ಆಗಿದೆ. ಕೆಲ ಕ್ಷೇತ್ರಗಳ ಬಗ್ಗೆ ಇನ್ನೂ 2 ಗಂಟೆಗಳ ಕಾಲ ಚರ್ಚೆ ಅಗತ್ಯವಿದೆ. ಕೆಲವು ಕ್ಷೇತ್ರಗಳಲ್ಲಿ ಹೆಚ್ಚಿನ ಅಭ್ಯರ್ಥಿಗಳಿದ್ದಾರೆ. ಕಾರ್ಯಕರ್ತರ ಅಭಿಪ್ರಾಯ ಹಾಗೂ ಸರ್ವೆ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಇದಾದ ಬಳಿಕ ಬಿಜೆಪಿ ಸಂಸದೀಯ ಮಂಡಳಿಗೆ ಪಟ್ಟಿ ರವಾನಿಸಲಾಗುತ್ತದೆ ಎಂದರು.
ಹಾಲಿ ಶಾಸಕರಿಗೆ ಟಿಕೆಟ್ ಸಿಗದಿರುವುದು ಕೇವಲ ಊಹಾಪೋಹ, ಎರಡು ಸಲ ನಡೆದ ಚರ್ಚೆ ಫಲಶ್ರುತಿ ಇಂದು ಗೊತ್ತಾಗಲಿದೆ. ಸೋಮವಾರ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ಹೇಳಿದ್ದಾರೆ.