ಆಗಸ್ಟ್ 30 ರಿಂದ ಸೆಪ್ಟೆಂಬರ್ 19ರವರೆಗೆ ಪಾಕಿಸ್ತಾನ ಹಾಗೂ ಶ್ರೀಲಂಕಾದ ಜಂಟಿ ಆತಿಥ್ಯದಲ್ಲಿ ನಡೆಯಲಿರುವ ಏಕದಿನ ಮಾದರಿಯ ಏಷ್ಯಾಕಪ್ ಟೂರ್ನಿಗೆ ಸೋಮವಾರ (ಆಗಸ್ಟ್ 21) ಬಿಸಿಸಿಐ ಸೆಲೆಕ್ಟರ್ಸ್ ಗಳು ಬಲಿಷ್ಠ 18 ಸದಸ್ಯರ ತಂಡವನ್ನು ಪ್ರಕಟಿಸಿದೆ.
ಸೆಪ್ಟೆಂಬರ್ 2 ರಂದು ಶ್ರೀಲಂಕಾದ ಪಲೆಕೇಲೆ ಕ್ರೀಡಾಂಗಣದಲ್ಲಿ ಸಾಂಪ್ರದಾಯಿಕ ವೈರಿ ಪಾಕಿಸ್ತಾನ ವಿರುದ್ಧದ ಪಂದ್ಯದ ಮೂಲಕ ರೋಹಿತ್ ಶರ್ಮಾ ಪಡೆ ತಮ್ಮ ಪಯಣ ಆರಂಭಿಸಲಿದೆ.ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಸ್ಥಾನ ಪಡೆದಿದ್ದ 5 ಆಟಗಾರರು ಸ್ಥಾನ ಪಡೆಯಲು ವಿಫಲರಾಗಿದ್ದಾರೆ. ಆ ಆಟಗಾರರ ವಿವರ ಇಲ್ಲಿದೆ.
1.ಜಯದೇವ್ ಉನಾದ್ಕಟ್
ವೆಸ್ಟ್ ಇಂಡೀಸ್ ಸರಣಿಯಲ್ಲಿ ಟೀಮ್ ಇಂಡಿಯಾ ಪರ 9 ವರ್ಷಗಳ ನಂತರ ಏಕದಿನ ಪಂದ್ಯ ಆಡುವ ಮೂಲಕ ದಾಖಲೆ ನಿರ್ಮಿಸಿದ್ದ ವೇಗಿ ಜಯದೇವ್ ಉನದ್ಕಾತ್ ಕೂಡ ಏಷ್ಯಾಕಪ್ ಟೂರ್ನಿಯಿಂದ ಹೊರಬಿದ್ದಿದ್ದಾರೆ.
2.ಯುಜ್ವೇಂದ್ರ ಚಹಲ್
ಐಸಿಸಿ ಆಯೋಜನೆಯ ಕಳೆದೆರಡು ಟಿ20 ವಿಶ್ವಕಪ್ ಟೂರ್ನಿಗಳಲ್ಲಿ ಸ್ಥಾನ ಪಡೆದಿದ್ದರೂ ಒಂದೇ ಒಂದು ಪಂದ್ಯ ಆಡದೆ ಬೆಂಚ್ ಕಾದಿದ್ದ ಅನುಭವಿ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಅವರನ್ನು ಎಸಿಸಿ ಆಯೋಜನೆಯ ಏಷ್ಯಾಕಪ್ ಟೂರ್ನಿಗೆ ಆಯ್ಕೆ ಮಾಡದೆ ನಿರ್ಲಕ್ಷಿಸಲಾಗಿದೆ.
3. ಋತುರಾಜ್ ಗಾಯಕ್ವಾಡ್
ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಋತುರಾಜ್ ಗಾಯಕ್ವಾಡ್ ಸ್ಥಾನ ಪಡೆದಿದ್ದರೂ, ಯುವ ವಿಕೆಟ್ ಕೀಪರ್, ಬ್ಯಾಟರ್ ಇಶಾನ್ ಕಿಶನ್ ಹ್ಯಾಟ್ರಿಕ್ ಅರ್ಧಶತಕ ಸಿಡಿಸಿ ಉತ್ತಮ ಫಾರ್ಮ್ ನಲ್ಲಿದ್ದರಿಂದ ಒಂದೇ ಒಂದು ಪಂದ್ಯ ಆಡುವ ಅವಕಾಶ ಸಿಕ್ಕಿರಲಿಲ್ಲ.
4.ಉಮ್ರಾನ್ ಮಲಿಕ್
ಐಪಿಎಲ್ ಟೂರ್ನಿಯಲ್ಲಿ ಅತಿ ವೇಗವಾಗಿ ಬೌಲಿಂಗ್ ಪ್ರದರ್ಶನ ತೋರುವ ಮೂಲಕ ಟೀಮ್ ಇಂಡಿಯಾಗೆ ಪ್ರವೇಶ ಮಾಡಿದ್ದ ಯುವ ವೇಗಿ ಉಮ್ರಾನ್ ಮಲಿಕ್ ಏಷ್ಯಾ ಕಪ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಎಡವಿದ್ದಾರೆ
5.ಮುಖೇಶ್ ಕುಮಾರ್
ವೆಸ್ಟ್ ಇಂಡೀಸ್ ವಿರುದ್ಧದ 3 ಸ್ವರೂಪದ ಕ್ರಿಕೆಟ್ ಗೆ ಪದಾರ್ಪಣೆ ಮಾಡಿ ದಾಖಲೆ ನಿರ್ಮಿಸಿದ್ದಲ್ಲದೆ, ಹಲವು ಪಂದ್ಯಗಳಲ್ಲಿ ಉತ್ತಮ ಬೌಲಿಂಗ್ ಪ್ರದರ್ಶನ ತೋರಿದ್ದ ಯುವ ವೇಗದ ಬೌಲರ್ ಮುಖೇಶ್ ಕುಮಾರ್ ಕೂಡ ಏಷ್ಯಾಕಪ್ ಟೂರ್ನಿಯಲ್ಲಿ ಸ್ಥಾನ ಪಡೆದಿಲ್ಲ.