ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋದ ಮುರುಘಾಶ್ರೀ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಜಿಲ್ಲೆ

ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಡಾ.ಶಿವಮೂರ್ತಿ ಮುರುಘಾ ಶರಣರು ಜಾಮೀನು ಕೋರಿ ಬೆಂಗಳೂರಿನ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ನ್ಯಾಯಾಂಗ ಬಂಧನದಲ್ಲಿರುವ ಶರಣರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾ.ಜೆ.ಎಂ.ಖಾಝಿ ಅವರಿದ್ದ ಪೀಠ ವಿಚಾರಣೆ ನಡೆಸಿತು. ಅಲ್ಲದೇ ರಾಜ್ಯ ಸರ್ಕಾರ, ಮೈಸೂರು ಜಿಲ್ಲಾ ಮಕ್ಕಳ ರಕ್ಷಣ ಘಟಕದ ಕಾನೂನು ಅಧಿಕಾರಿ ಚಜ್ಜೇಗೌಡ ಮತ್ತು ಅಪ್ರಾಪ್ತ ಮಕ್ಕಳಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಅಕ್ಟೋಬರ್ 28 ಕ್ಕೆ ಮುಂದೂಡಿದೆ.