ಬೆಂಗಳೂರು: ದೀಪಾವಳಿ ಹಬ್ಬದ ಸಮಯದಲ್ಲಿ ಪ್ರಯಾಣಿಕರ ದಟ್ಟಣೆ ಜಾಸ್ತಿ ಇರಲಿರುವುದರಿಂದ ಅಕ್ಟೋಬರ್ 31 ರಿಂದ ನವೆಂಬರ್ 2 ವರೆಗೆ ರಾಜ್ಯದ್ಯಂತ ವಿಶೇಷ ರೈಲುಗಳು ಸಂಚರಿಸಲಿವೆ.
ರೈಲ್ವೇ ಖಾತೆಯ ರಾಜ್ಯ ಸಚಿವ ಸೋಮಣ್ಣ ಅವರು ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರವನ್ನು ತಿಳಿಸಿದ್ದಾರೆ.
ಪೋಸ್ಟ್ನಲ್ಲಿ ಏನಿದೆ?
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಜನದಟ್ಟಣೆ ನಿಯಂತ್ರಿಸಿ, ಸುಗಮ ಸಂಚಾರಕ್ಕಾಗಿ ವಿಶೇಷ ರೈಲುಗಳ ಸಂಚಾರದ ವ್ಯವಸ್ಥೆ ಮಾಡಲಾಗಿದೆ. ಇದೇ ಅಕ್ಟೋಬರ್ 31 ರಿಂದ ನವೆಂಬರ್ 2 ವರೆಗೆ ರಾಜ್ಯದಾದ್ಯಂತ ವಿಶೇಷ ರೈಲುಗಳು ಸಂಚರಿಸಲಿವೆ.
ಪ್ರಯಾಣಿಕರಿಗೆ ಉತ್ತಮ ಸಂಚಾರದ ವ್ಯವಸ್ಥೆ ಕಲ್ಪಿಸಲು ಭಾರತೀಯ ರೈಲ್ವೆ ಒಟ್ಟು 34 ವಿಶೇಷ ರೈಲುಗಳ ವ್ಯವಸ್ಥೆಮಾಡಿದೆ. ಸಾರ್ವಜನಿಕರು ಈ ವಿಶೇಷ ರೈಲುಗಳ ಸೌಲಭ್ಯ ಪಡೆದುಕೊಳ್ಳಿ, ನಿಮ್ಮ ಹಬ್ಬದ ಸಂಭ್ರಮ ಇಮ್ಮಡಿಯಾಗಲಿ ಎಂದು ಪ್ರಾರ್ಥಿಸುತ್ತೇನೆ.