ಹುಬ್ಬಳ್ಳಿ/ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಸಿಪಿ ಯೋಗೇಶ್ವರ್ ಅವರಿಂದು ಬಿಜೆಪಿ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಸಂಜೆ ನಾಲ್ಕು ಗಂಟೆ ಸುಮಾರಿಗೆ ಹುಬ್ಬಳ್ಳಿಗೆ ತೆರಳಿದ ಯೋಗೇಶ್ವರ್, ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದಾರೆ.
ಚನ್ನಪಟ್ಟಣ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿಯಲು ಸಿಪಿವೈ ನಿರ್ಧರಿಸಿದ್ದರು. ಕೊನೇ ಕ್ಷಣದವರೆಗೂ ಟಿಕೆಟ್ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಸಿಪಿವೈಗೆ ಬಿಜೆಪಿ ಕಡೆಯಿಂದ ಯಾವುದೇ ಶುಭ ಸುದ್ದಿ ಸಿಗದ ಕಾರಣ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು ನಿರ್ಧರಿಸಿದ್ದಾರೆ. ಹಾಗಾಗಿ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.