PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಎಸ್​ಎಸ್​ಎಲ್​ಸಿಗೆ ಮೂರು ಬಾರಿ ಎಕ್ಸಾಂ ಮಾಡಲು ನಿರ್ಧಾರ – ಮಧು ಬಂಗಾರಪ್ಪ

September 24, 2023

ತುಳುವಿನಲ್ಲಿ ಒಡು ಪೊಗ್ಗುನಿ ಅನ್ನುತ್ತಾರೆ. ಜೆಡಿಎಸ್ ಎಲ್ಲೆಲ್ಲಿ ಹೋಗಿದ್ದಾರೊ ಅಲ್ಲಿ ಅದರ ಕಥೆ ಮುಗಿಯಿತು ಎಂದು ಲೆಕ್ಕ -ವೀರಪ್ಪ ಮೊಯ್ಲಿ

September 24, 2023

ಯೋಜನೆಗಳ ಹೆಸರಲ್ಲಿ ಕೊಳ್ಳೆ ಹೊಡೆಯುವ ಹುನ್ನಾರ ಕಾಂಗ್ರೆಸ್ ಸರ್ಕಾರದ್ದು – ಹೆಚ್ ಡಿಕೆ

September 24, 2023
Facebook Twitter Instagram
Monday, September 25
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ಕೋಲಾರದಲ್ಲಿ ಸ್ಪರ್ಧೆ ಮಾಡುವಂತೆ ಒತ್ತಾಯ: ಸಿದ್ದರಾಮಯ್ಯ ಮನೆ ಮುಂದೆ ಕಾರ್ಯಕರ್ತರ ಧರಣಿ
ಬೆಂಗಳೂರು Prajatv KannadaBy Prajatv KannadaMarch 21, 2023

ಕೋಲಾರದಲ್ಲಿ ಸ್ಪರ್ಧೆ ಮಾಡುವಂತೆ ಒತ್ತಾಯ: ಸಿದ್ದರಾಮಯ್ಯ ಮನೆ ಮುಂದೆ ಕಾರ್ಯಕರ್ತರ ಧರಣಿ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಬೆಂಗಳೂರು: ಕೋಲಾರ ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವಂತೆ ಆಗ್ರಹಿಸಿ ಸಿದ್ದರಾಮಯ್ಯ ಅವರ ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ಸಿದ್ದರಾಮಯ್ಯ ಮನೆಯ ಮುಂದೆ ಧರಣಿ ನಡೆಸುತ್ತಿದ್ದಾರೆ.

ಶಿವಾನಂದ ಸರ್ಕಲ್ ಬಳಿ ಇರುವ ಸಿದ್ದರಾಮಯ್ಯ ಮನೆಯ ಮುಂದೆ ಸಾಕಷ್ಟು ಸಂಖ್ಯೆಯಲ್ಲಿ ಸೇರಿರುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಿದ್ದರಾಮಯ್ಯ ಅಭಿಮಾನಿಗಳು ಸಿದ್ದರಾಮಯ್ಯ ಕೋಲಾರದಿಂದಲೇ ಸ್ಪರ್ಧೆ ನಡೆಸುವಂತೆ ಆಗ್ರಹಿಸುತ್ತಿದ್ದಾರೆ.

 

ಸಿದ್ದರಾಮಯ್ಯ ಕೋಲಾರದಿಂದಲೇ ಸ್ಪರ್ಧೆ ಮಾಡುವುದಾಗಿ ತಿಳಿಸಿದ್ದರು. ಆದರೆ ಹೈಕಮಾಂಡ್ ಸೂಚನೆಯಂತೆ ಅವರು ಕೋಲಾರದಿಂದ ಸ್ಪರ್ಧೆ ಮಾಡುವುದರಿಂದ ಹಿಂದೆ ಸರಿದಿದ್ದಾರೆ. ಈ ಹಿನ್ನೆಲೆಯಲ್ಲಿ ಕೋಲಾರದ ಕಾಂಗ್ರೆಸ್ ಕಾರ್ಯಕರ್ತರು ಸಿದ್ದರಾಮಯ್ಯ ಮನೆಯ ಮುಂದೆ ಜಮಾಯಿಸಿ ಸ್ಪರ್ಧೆಗೆ ಬೇಡಿಕೆ ಇಡುತ್ತಿದ್ದಾರೆ.

ಕೊಟ್ಟ ಮಾತು ತಪ್ಪಬೇಡಿ, ಕೋಲಾರದಿಂದಲೇ ಸ್ಪರ್ಧೆ ಮಾಡಿ, ರಕ್ತ ಕೊಟ್ಟೇವು ಸಿದ್ದರಾಮಯ್ಯ ಅವರನ್ನು ಬಿಡೆವು. ಕೋಲಾರ ನಮ್ಮೂರು ಸಿದ್ದರಾಮಯ್ಯ ನಮ್ಮವರು ಎಂಬಿತ್ಯಾದಿ ಬಿತ್ತಿ ಪತ್ರಗಳನ್ನು ಇಟ್ಟುಕೊಂಡು ಅಭಿಮಾನಿಗಳು ಘೋಷಣೆ ಕೂಗುತ್ತಿದ್ದಾರೆ.

ಸಿದ್ದರಾಮಯ್ಯಮನವೊಲಿಕೆಗೆಪ್ರಯತ್ನ
ಕೋಲಾರ ಸ್ಪರ್ಧೆ ಗೊಂದಲ ಹಿನ್ನೆಲೆಯಲ್ಲಿ ಸೋಮವಾರ ತಡರಾತ್ರಿಯವರೆಗೂ ಸಿದ್ದರಾಮಯ್ಯ ಮನವೊಲಿಸಲು ಹರಸಾಹಸವನ್ನು ಕೋಲಾರದ ಕಾಂಗ್ರೆಸ್ ನಾಯಕರು ನಡೆಸಿದ್ದಾರೆ.

ಕಾಂಗ್ರೆಸ್ ಹಿರಿಯ ನಾಯಕ ರಮೇಶ್ ಕುಮಾರ್ ಸುಮಾರು 2 ಗಂಟೆಗಳ ಕಾಲ ಸಿದ್ದರಾಮಯ್ಯ ಮನವೊಲಿಸುವ ಪ್ರಯತ್ನವನ್ನು ನಡೆಸಿದ್ದಾರೆ.

ಯಾವುದೇ ಕಾರಣಕ್ಕೂ ತಮ್ಮ ನಿರ್ಧಾರ ಬದಲಿಸಬೇಡಿ ಎಂದು ಮನವಿ ಮಾಡಿರುವ ರಮೇಶ್ ಕುಮಾರ್, ಹೈಕಮಾಂಡ್ ಜೊತೆ ಮಾತನಾಡಿ ಎಂದು ಒತ್ತಾಯಿಸಿದ್ದಾರೆ ಎಂದು ತಿಳಿದುಬಂದಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿಕೋಲಾರ ವಿಧಾನಸಭಾ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಬೇಕು ಎಂಬುದು ಕ್ಷೇತ್ರದ ಮತದಾರರ ಒತ್ತಾಯವಾಗಿದೆ. ಅದಕ್ಕಾಗಿ ಸಿದ್ದರಾಮಯ್ಯರನ್ನು ಒತ್ತಾಯಿಸಲು ಬೆಂಗಳೂರಿನ ಅವರ ನಿವಾಸದ ಬಳಿಗೆ ಮಂಗಳವಾರ (ಇಂದು) ಬೆಳಗ್ಗೆ 11 ಗಂಟೆಗೆ ಸೇರಬೇಕು, ಕೋಲಾರ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ಬೂತ್‌ ಮಟ್ಟದಿಂದ ಕನಿಷ್ಠ 25 ಜನರಂತೆ ಐದು ಸಾವಿರಕ್ಕೂ ಹೆಚ್ಚು ಜನ ಸೇರಬೇಕು ಎನ್ನುವ ತೀರ್ಮಾನವನ್ನು ನಿನ್ನೆ ಸಭೆಯಲ್ಲಿ ತೆಗೆದುಕೊಳ್ಳಲಾಗಿತ್ತು.

ಒಕ್ಕಲಿಗರಶಕ್ತಿಪ್ರದರ್ಶನ:
ಕೆಪಿಸಿಸಿ ಸದಸ್ಯೆ ನಂದಿನಿ ಪ್ರವೀಣ್‌ ಮಾತನಾಡಿ, ಪ್ರಸ್ತುತ ಇವತ್ತಿನ ವರದಿಯನ್ನು ಗಮನಿಸಿದರೆ ಗ್ರಾಮೀಣ ಪ್ರದೇಶಗಳಲ್ಲಿ ಕಾಂಗ್ರೆಸ್‌ ಬಲಿಷ್ಠವಾಗಿದೆ. ಸಿದ್ದರಾಮಯ್ಯ ಅವರು ಕೋಲಾರದಲ್ಲಿ ಸ್ಪರ್ಧೆ ಮಾಡಲೇಬೇಕು ಎಂಬುದು ನಮ್ಮೆಲ್ಲರ ಉದ್ದೇಶವಾಗಿದ್ದು, ಒಕ್ಕಲಿಗ ಸಮುದಾಯವು ಅವರನ್ನು ಬೆಂಬಲಿಸಲಿದೆ ಎಂಬುದನ್ನು ಸೂಚಿಸಲು ನಮ್ಮ ಶಕ್ತಿ ಪ್ರದರ್ಶನ ಮಾಡಬೇಕು ಎಂದರು.

ಈ ವರೆಗೆ ಕ್ಷೇತ್ರದಲ್ಲಿ ನಾನಾ ಪಕ್ಷಗಳು, ಖಾಸಗಿ ಸಂಸ್ಥೆಯವರು ನಡೆಸಿದ ನಾಲ್ಕು ಸಮೀಕ್ಷೆಗಳೂ ಸಿದ್ದರಾಮಯ್ಯ ಅವರ ಪರವಾಗಿವೆ. ಹೀಗಾಗಿ, ಅವರು ಇದೇ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು. ಈ ವಿಚಾರವಾಗಿ ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವ ಕುಮಾರ್‌ ಅವರಿಗೂ ಒತ್ತಾಯಿಸುತ್ತೇವೆ ಎಂದು ತಿಳಿಸಿದರು.

ಸಿದ್ದುಮನೆಗೆಚಲೋ:
ಇನ್ನು ಸೋಮವಾರ ನಗರದ ಕನಕ ಮಂದಿರದಲ್ಲಿ ಸಭೆ ನಡೆಸಿದ ಕುರುಬ ಸಮುದಾಯದ ಮುಖಂಡರು, ಕೋಲಾರ ವಿಧಾನಸಭೆ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಸ್ಪರ್ಧೆ ಮಾಡಲೇಬೇಕೆಂದು ಒತ್ತಾಯಿಸಿ ಮಂಗಳವಾರ ಬೆಂಗಳೂರಿನ ಸಿದ್ದರಾಮಯ್ಯ ಮನೆಗೆ ಚಲೋ ಹಮ್ಮಿಕೊಳ್ಳಲು ತೀರ್ಮಾನ ಕೈಗೊಂಡರು. ಸುಮಾರು ಐದರಿಂದ ಹತ್ತು ಸಾವಿರ ಜನ ಸೇರುವಂತೆ ಮುಖಂಡರು ಕರೆನೀಡಿದರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಮಾತು ಕೊಟ್ಟಂತೆ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿಸ್ಪರ್ಧೆ ಮಾಡಲೇ ಬೇಕು, ಸುಳ್ಳು ಮಾಹಿತಿಗಳಿಗೆ, ಯಾವುದೇ ಸಮೀಕ್ಷೆಗಳಿಗೆ ಬೆಲೆ ನೀಡಬಾರದು, ಕ್ಷೇತ್ರದ ಜನತೆ ಸಿದ್ದರಾಮಯ್ಯ ನವರನ್ನು ಗೆಲ್ಲಿಸುವುದರಲ್ಲಿ ಯಾವುದೇ ಅನು ಮಾನ ಇಲ್ಲವೆಂದು ಸಿದ್ದರಾಮಯ್ಯ ನವರಿಗೆ ಮನವರಿಕೆ ಮಾಡಿಕೊಡಬೇಕೆಂದು ಸಭೆ ನಿರ್ಣಯ ಕೈಗೊಂಡಿತು.

Demo
Share. Facebook Twitter WhatsApp Pinterest LinkedIn Tumblr Telegram Email

Related Posts

ಎಸ್​ಎಸ್​ಎಲ್​ಸಿಗೆ ಮೂರು ಬಾರಿ ಎಕ್ಸಾಂ ಮಾಡಲು ನಿರ್ಧಾರ – ಮಧು ಬಂಗಾರಪ್ಪ

September 24, 2023

ತುಳುವಿನಲ್ಲಿ ಒಡು ಪೊಗ್ಗುನಿ ಅನ್ನುತ್ತಾರೆ. ಜೆಡಿಎಸ್ ಎಲ್ಲೆಲ್ಲಿ ಹೋಗಿದ್ದಾರೊ ಅಲ್ಲಿ ಅದರ ಕಥೆ ಮುಗಿಯಿತು ಎಂದು ಲೆಕ್ಕ -ವೀರಪ್ಪ ಮೊಯ್ಲಿ

September 24, 2023

ಯೋಜನೆಗಳ ಹೆಸರಲ್ಲಿ ಕೊಳ್ಳೆ ಹೊಡೆಯುವ ಹುನ್ನಾರ ಕಾಂಗ್ರೆಸ್ ಸರ್ಕಾರದ್ದು – ಹೆಚ್ ಡಿಕೆ

September 24, 2023

ಕಳೆದ 10 ವರ್ಷದಲ್ಲಿ ಮೋದಿ‌ ದೇಶವನ್ನು ದಿವಾಳಿ ಮಾಡಿದ್ದಾರೆ ಎಂದು ಸಚಿವ ಸಂತೋಷ್ ಲಾಡ್

September 24, 2023

ಕಾವೇರಿ ವಿಚಾರದಲ್ಲಿ ಸರ್ಕಾರ ಸಮಪರ್ಕವಾಗಿ ಕಾನೂನಾತ್ಮಕ ಹೋರಾಟ ಮಾಡಿದೆ: ಕೆ.ಎನ್ ರಾಜಣ್ಣ!

September 24, 2023

ಬಿಜೆಪಿ- ಜೆಡಿಎಸ್ ಮೈತ್ರಿ ವಿಚಾರ ಜೆಡಿಎಸ್ ಮುಸ್ಲಿಂ ನಾಯಕರ ವಿರೋಧ, ಪಕ್ಷ ತೊರೆಯಲು ಸಜ್ಜು!

September 24, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.