ಹೈದರಾಬಾದ್;- ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅರೆಸ್ಟ್ ಮಾಡಲಾಗಿದೆ.
CID ನೇತೃತ್ವದ ಪೊಲೀಸರ ಆರ್ಕೆ ಫಂಕ್ಷನ್ ಹಾಲ್ನಲ್ಲಿರುವ ನಾಯ್ಡು ಅವರ ನಿವಾಸಕ್ಕೆ ಮುಂಜಾನೆ 3 ಗಂಟೆಗೆ ಆಗಮಿಸಿದ್ದಾರೆ. ಈ ಸಮಯದಲ್ಲಿ ಚಂದ್ರಬಾಬು ನಾಯ್ದು ವಿಶ್ರಾಂತಿ ಪಡೆಯುತ್ತಿದ್ದರು. ಪೊಲೀಸರು ವಶಕ್ಕೆ ಪಡೆಯಲು ಬಂದ ವಿಚಾರ ತಿಳಿದು ಭಾರೀ ಸಂಖ್ಯೆಯಲ್ಲಿ ನಾಯ್ಡು ಮನೆ ಬಳಿ ಅಭಿಮಾನಿಗಳು ಸೇರಿದ್ದರು. ಅಭಿಮಾನಿಗಳ ಪ್ರತಿಭಟನೆಯಿಂದ ಪೊಲೀಸರಿಗೆ ನಾಯ್ದು ಅವರನ್ನು ವಶಕ್ಕೆ ಪಡೆಯಲು ಸಾಧ್ಯವಾಗಲಿಲ್ಲ.
ಕೌಶಲ್ಯ ಅಭಿವೃದ್ಧಿ ನಿಗಮದ ಹಗರಣದಲ್ಲಿ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲಾಗಿದ್ದು, ನಾಯ್ಡು ಅವರ ರಕ್ಷಣೆಗೆ ನಿಯೋಜನೆಗೊಂಡಿದ್ದ ಎಸ್ಪಿಜಿ ಪಡೆಗಳು ಸಹ ಪೊಲೀಸರಿಗೆ ಅನುಮತಿ ನೀಡಿರಲಿಲ್ಲ. ಕೊನೆಗೆ 6 ಗಂಟೆಗೆ ಚಂದ್ರಬಾಬು ನಾಯ್ಡು ಅವರನ್ನು ಪೊಲೀಸರು ಬಂಧಿಸಿದರು.