ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಭೇಟಿ ಕುರಿತು ಸ್ಪಷ್ಟನೆಯನ್ನೂ ನೀಡಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂದು (ಬುಧವಾರ) ಮಾಜಿ ಸಿಎಂ ಕುಮಾರಸ್ವಾಮಿ ದೆಹಲಿಗೆ ಪ್ರಯಾಣ ಬೆಳೆಸಿದರು. ಈ ವೇಳೆ ಮಾತನಾಡಿದ ಅವರು, ದೆಹಲಿ ಬಿಜೆಪಿ ನಾಯಕರ ಭೇಟಿ ವಿಚಾರವನ್ನು ಅಲ್ಲಗಳೆದರು.
ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸಂಬಂಧ ಯಾವುದೇ ಸೀಟು ಹಂಚಿಕೆ ಕುರಿತು ಚರ್ಚಗೆ ಹೋಗ್ತಿಲ್ಲ. ಬದಲಾಗಿ ವೈಯಕ್ತಿಕ ಕೆಲಸದ ನಿಮಿತ್ತ ಹೋಗುತ್ತಿದ್ದೇನೆ. ದೆಹಲಿಗೆ ಹೋಗೋದು ಏನ್ ವಿಶೇಷನಾ ಎಂದು ಕೇಳಿದರು.